ಮೈಸೂರು

ಸಾಧಕರಿಗೆ ಗುಂಡೂರಾವ್ ಪ್ರಶಸ್ತಿ ಪ್ರದಾನ

ಮೈಸೂರು,ಜೂ.24-ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಏಳು ಮಂದಿ ಸಾಧಕರಿಗೆ ಗುಂಡೂರಾವ್ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಪರಿವರ್ತನಂ ಟ್ರಸ್ಟ್ ವತಿಯಿಂದ ಶನಿವಾರ ನಗರದ ಜೆಎಲ್ ಬಿ ರಸ್ತೆಯಲ್ಲಿರುವ ರೋಟರಿ ಸಭಾಂಗಣದಲ್ಲಿ ಆಯೋಜಿಸಿದ್ದ ಗುಂಡೂರಾವ್ ನೆನಪಿನಂಗಳ ಮತ್ತು ಗುಂಡೂರಾವ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಸಾಧಕರನ್ನು ಆತ್ಮೀಯವಾಗಿ ಸನ್ಮಾನಿಸಲಾಯಿತು.

ಸಮಾಜ ಸೇವಕ ಕೆ.ರಘುರಾಂ, ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ನಾರಾಯಣಗೌಡ, ಪ್ರಕಾಶ್ ಸೇರಿದಂತೆ ಇತರರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಶಿಕ್ಷಣ ಸಚಿವ ತನ್ವೀರ್ ಸೇಠ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕಾಂಗ್ರೆಸ್ ನಗರಾಧ್ಯಕ್ಷ ಆರ್.ಮೂರ್ತಿ, ಕಾಂಗ್ರೆಸ್ ಮುಖಂಡ ಧ್ರುವರಾಜ್ ಸೇರಿದಂತೆ ಇತರರು ಉಪಸ್ಥಿತರಿದ್ದರು. (ವರದಿ-ಎಚ್.ಎನ್, ಎಂ.ಎನ್)

Leave a Reply

comments

Related Articles

error: