
ಪ್ರಮುಖ ಸುದ್ದಿ
ಕಾಡುಹಂದಿ ದಾಳಿ: ಮಹಿಳೆಗೆ ತೀವ್ರ ಗಾಯ, ಆಸ್ಪತ್ರೆಗೆ ದಾಖಲು
ಪ್ರಮುಖ ಸುದ್ದಿ, ಗುಂಡ್ಲುಪೇಟೆ, ಜೂ.24: ಕಾಡುಹಂದಿ ದಾಳಿಗೆ ಮಹಿಳೆಯೊಬ್ಬರು ತ್ರೀವ್ರವಾಗಿ ಗಾಯಗೊಂಡಿರುವ ಘಟನೆ ಬಂಡೀಪುರ ರಾಷ್ಟ್ರೀಯ ಉದ್ಯಾನವನದ ಕಾಡಂಚಿನ ಕಣಿಯನಪುರ ಗ್ರಾಮದಲ್ಲಿ ನಡೆದಿದೆ.
ವಿಜಯ(45) ಹಂದಿ ದಾಳಿಗೆ ತುತ್ತಾದವರು. ತಮ್ಮ ಮನೆಯಿಂದ ಹೊರು ಬಂದು ತೆರಳುತ್ತಿದ್ದ ವೇಳೆ ಕಾಡುಹಂದಿ ದಾಳಿ ನಡೆಸಿದೆ. ಘಟನೆಯಲ್ಲಿ ಮುಖ, ಹಾಗೂ ಕೈಕಾಲಿನ ಭಾಗಕ್ಕೆ ತೀವ್ರ ಪೆಟ್ಟಾಗಿದೆ. ಕೂಡಲೇ ವಿಜಯ ಅವರನ್ನು ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ. (ವರದಿ ಬಿ.ಎಂ)