ಸುದ್ದಿ ಸಂಕ್ಷಿಪ್ತ

ಜೂ.27 ರಂದು ಅಂತರರಾಷ್ಟ್ರೀಯ ಮಾದಕ ವಸ್ತು ವಿರೋಧಿ ದಿನಾಚರಣೆ

ಮಡಿಕೇರಿ ಜೂ.24:-ಶಕ್ತಿಧಾಮ ಆಸ್ಪತ್ರೆ ವತಿಯಿಂದ ಪೊಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜೂನಿಯರ್ ಕಾಲೇಜು ಇವರ ಸಹಕರಾದಲ್ಲಿ ಜೂನ್, 27 ರಂದು ಬೆಳಗ್ಗೆ 10.30 ಗಂಟೆಗೆ ನಗರದ ಜೂನಿಯರ್ ಕಾಲೇಜಿನಲ್ಲಿ ಅಂತರರಾಷ್ಟ್ರೀಯ ಮಾದಕ ವಸ್ತು ವಿರೋಧಿ ದಿನಾಚರಣೆ ನಡೆಯಲಿದೆ.

ಸರ್ಕಾರಿ ಜೂನಿಯರ್ ಕಾಲೇಜಿನ ಪ್ರಾಂಶುಪಾಲರಾದ ಬಿ.ಎಂ.ಬೆಳ್ಯಪ್ಪ, ಜೆಎಂಎಫ್‍ಸಿ ನ್ಯಾಯಾಧೀಶರಾದ ಶಿವಾನಂದ ಹಂಚಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಜೇಂದ್ರ ಪ್ರಸಾದ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ಮಮ್ತಾಜ್, ಜಿಲ್ಲಾ ಆಸ್ಪತ್ರೆಯ ಡಾ.ವಿ.ಎಸ್.ಸತೀಶ್, ಇತರರು ಪಾಲ್ಗೊಳ್ಳಲಿದ್ದಾರೆ. (ಕೆಸಿಐ,ಎಸ್.ಎಚ್)

Leave a Reply

comments

Related Articles

error: