ಕ್ರೀಡೆಪ್ರಮುಖ ಸುದ್ದಿ

300ರನ್ ಗಳಿಸಿ ಆಸ್ಟ್ರೇಲಿಯಾ ಹಿಂದಿಕ್ಕಿದ ಭಾರತ

ಪ್ರಮುಖ ಸುದ್ದಿ, ಕ್ರೀಡೆ, ಪೋರ್ಟ್ ಆಫ್ ಸ್ಪೇನ್, ಜೂ.26: ವೆಸ್ಟ್ ಇಂಡೀಸ್ ವಿರುದ್ಧ ಎರಡನೇ ಏಕದಿನ ಪಂದ್ಯದಲ್ಲಿ ಭಾರತ 105 ರನ್ ಗಳ ಭರ್ಜರಿ ಜಯ ಸಾಧಿಸಿದೆಯಲ್ಲದೆ ಮತ್ತೊಂದು ವಿಶಿಷ್ಟ ದಾಖಲೆ ಮಾಡಿದೆ. ಅತಿ ಹೆಚ್ಚು ಬಾರಿ 300ಕ್ಕೂ ಹೆಚ್ಚು ರನ್ ಗಳಿಸಿದ ವಿಶ್ವದ ಏಕೈಕ ತಂಡವಾಗಿ ಹೊರಹೊಮ್ಮಿದೆ.

ಭಾರತ ವೆಸ್ಟ್ ಇಂಡೀಸ್ ವಿರುದ್ಧದ 2ನೇ ಏಕದಿನ ಪಂದ್ಯದಲ್ಲಿ 310 ರನ್ ಗಳಿಸುವ ಮೂಲಕ ಆಸ್ಟ್ರೇಲಿಯಾ ಹೆಸರಿನಲ್ಲಿದ್ದ ದಾಖಲೆಯನ್ನು ಅಳಿಸಿ ಹಾಕಿದೆ. ಇದುವರೆಗೆ ಆಸ್ಟ್ರೇಲಿಯಾ 95 ಬಾರಿ 300ಕ್ಕೂ ಅಧಿಕ ರನ್ ಗಳಿಸಿ ದಾಖಲೆ ಬರೆದಿತ್ತು. ಇದೀಗ ಭಾರತ 96 ಬಾರಿ 300ಕ್ಕೂ ಹೆಚ್ಚು ರನ್ ಗಳಿಸಿ ಆಸ್ಟ್ರೇಲಿಯಾವನ್ನು ಹಿಂದಿಕ್ಕಿದೆ. ಭಾರತ, ಆಸ್ಟ್ರೇಲಿಯಾ ನಂತರದ ಸ್ಥಾನದಲ್ಲಿ ದಕ್ಷಿಣ ಆಫ್ರಿಕಾ (77), ಪಾಕಿಸ್ತಾನ (69), ಶ್ರೀಲಂಕಾ (63), ಇಂಗ್ಲೆಂಡ್ (57) ಹಾಗೂ ನ್ಯೂಜಿಲೆಂಡ್ (51) ತಂಡಗಳಿವೆ. ಇತ್ತೀಚಿನ ವರ್ಷಗಳಲ್ಲಿ ಭಾರತ ಎಲ್ಲಾ ಮಾದರಿಯಲ್ಲೂ ಉತ್ತಮ ಪ್ರದರ್ಶನ ನೀಡುತ್ತಿದ್ದು, ದಾಖಲೆಗಳ ಮೇಲೆ ದಾಖಲೆ ಬರೆಯುತ್ತಿದೆ. (ವರದಿ ಬಿ.ಎಂ)

Leave a Reply

comments

Related Articles

error: