ಕರ್ನಾಟಕಪ್ರಮುಖ ಸುದ್ದಿಮೈಸೂರು

ರಾಯಚೂರಿನಲ್ಲಿ ನಡೆಯುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಡಾ. ಬರಗೂರು ರಾಮಚಂದ್ರಪ್ಪ ಅಧ್ಯಕ್ಷತೆ

82ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಹಿರಿಯ ಸಾಹಿತಿ ಡಾ. ಬರಗೂರು ರಾಮಚಂದ್ರಪ್ಪ ಆಯ್ಕೆಯಾಗಿದ್ದಾರೆ. ಈ ಬಾರಿಯ ಸಾಹಿತ್ಯ ಸಮ್ಮೇಳನವು ರಾಯಚೂರಿನಲ್ಲಿ ನಡೆಯಲಿದ್ದು, ಡಿಸೆಂಬರ್ 2-4ರ ವರೆಗೆ ಸಮ್ಮೇಳನದ ದಿನಾಂಕ ನಿಗದಿಪಡಿಸಲಾಗಿದೆ ಎಂದು ತಿಳಿದುಬಂದಿದೆ.

ನವದೆಹಲಿಯಲ್ಲಿ ನಡೆದ ಕನ್ನಡ ಸಾಹಿತ್ಯ ಪರಿಷತ್ ಕಾರ್ಯಕಾರಣಿ ಸಭೆಯಲ್ಲಿ ಬರಗೂರು ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ರಾಜ್ಯದ ಎಲ್ಲ ಜಿಲ್ಲೆಗಳ ಕಸಾಪ ಅಧ್ಯಕ್ಷರು, ಪದಾಧಿಕಾರಿಗಳು ಈ ಸಭೆಯಲ್ಲಿ ಭಾಗವಹಿಸಿದ್ದರು.

ರಾಯಚೂರಿನಲ್ಲಿ 60 ವರ್ಷಗಳ ಬಳಿಕ ಸಮ್ಮೇಳನ ನಡೆಯುತ್ತಿದ್ದು, ರಾಯಚೂರು ಅಥವಾ ಹೈದರಾಬಾದ್ ಕರ್ನಾಟಕ ಭಾಗದವರು ಅಧ್ಯಕ್ಷರಾಗುವ ನಿರೀಕ್ಷೆಯಿತ್ತು. ಅಧ್ಯಕ್ಷ ಸ್ಥಾನದ ಪೈಪೋಟಿಯಲ್ಲಿ ಸಾಹಿತಿಗಳಾದ ಜಂಬಣ್ಣ ಅಮರಚಿಂತ, ರಾಜಶೇಖರ್, ಚನ್ನಣ್ಣ ವಾಲಿಕಾರ್, ಪಂಚಾಕ್ಷರಿ ಹಿರೇಮಠ್, ಕೆ.ಪಿ. ಜಟ್ಟಿ ಅವರುಗಳು ಇದ್ದರು.

ರಾಮಚಂದ್ರಪ್ಪ ಬೆಂಗಳೂರು ವಿವಿಯ ಕನ್ನಡ ವಿಭಾಗದಲ್ಲಿ ಪ್ರೊಫೆಸರ್ ಆಗಿ, ಕನ್ನಡ ಸಾಹಿತ್ಯ ಅಕಾಡೆಮಿ ಹಾಗೂ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ಇವರ ಅನೇಕ ಕಾದಂಬರಿಗಳು ಚಲನ ಚಿತ್ರಗಳಾವೆ. ರಾಜ್ಯ, ರಾಷ್ಟ್ರಮಟ್ಟದ ಪ್ರಶಸ್ತಿಗಳಿಗೆ ಭಾಜನರಾಗಿರುವ ಬರಗೂರರು ಕನ್ನಡ ನಾಡು-ನುಡಿ ಕುರಿತ ಚಿಂತಕರಾಗಿದ್ದಾರೆ.

Leave a Reply

comments

Related Articles

error: