ಕರ್ನಾಟಕ

ಪೈಕೇರ ಕಪ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ವಿಜೇತರಿಗೆ ಅಭಿನಂದನೆ

ರಾಜ್ಯ(ಮಡಿಕೇರಿ)ಜೂ.26:-  ಕಳೆದ ಏಪ್ರಿಲ್-ಮೇ ತಿಂಗಳಲ್ಲಿ ನಡೆದ ಗೌಡ ಜನಾಂಗ ಬಾಂಧವರ ನಡುವಿನ ಪೈಕೇರ ಕಪ್ ಕ್ರಿಕೆಟ್ ಪಂದ್ಯಾವಳಿ ಯಶಸ್ವಿಯಾದ ಹಿನ್ನೆಲೆಯಲ್ಲಿ ಪೈಕೇರ ಕುಟುಂಬ ಹಾಗೂ ಕೊಡಗು ಗೌಡ ಯುವ ವೇದಿಕೆ ವತಿಯಿಂದ ಅಭಿನಂದನಾ ಸಮಾರಂಭ ಏರ್ಪಡಿಸಲಾಗಿತ್ತು.

ಕೊಡಗು ಗೌಡ ವಿದ್ಯಾಸಂಘದ ಸಭಾಂಗಣದಲ್ಲಿ ನಡೆದ ಸಮಾರಂಭದ ಅಧ್ಯಕ್ಷತೆಯನ್ನು ಪೈಕೇರ ಕುಟುಂಬದ ಪಟ್ಟೆದಾರ ಪೈಕೇರ ನಂಜುಂಡ ವಹಿಸಿದ್ದರು. ಪೈಕೇರ ಕ್ರೀಡಾ  ಸಮಿತಿ ಅಧ್ಯಕ್ಷ ಅನಂತ್‍ರಾಂ ಅವರು ಕ್ರಿಕೆಟ್ ಉತ್ಸವಕ್ಕೆ ಸಹಕರಿಸಿದ ಸರ್ವರಿಗೂ ಅಭಿನಂದನೆ ಸಲ್ಲಿಸಿದರು. ಈ ಸಂದರ್ಭ ಕೊಡಗು ಗೌಡ ಯುವ ವೇದಿಕೆ ಅಧ್ಯಕ್ಷ ಪೈಕೇರ ಮನೋಹರ ಮಾದಪ್ಪ, ಉಪಾಧ್ಯಕ್ಷ ಪಾಣತ್ತಲೆ ಜಗದೀಶ್ ಮಂದಪ್ಪ, ಖಜಾಂಚಿ ನೈಯ್ಯಣಿ ಸಂಜು, ಕ್ರೀಡಾ ಸಮಿತಿ ಅಧ್ಯಕ್ಷ ಬಾಳಾಡಿ ಮನೋಜ್ ಇದ್ದರು. ಪ್ರಚಾರ ಸಮಿತಿ ಅಧ್ಯಕ್ಷ ಕುಡೆಕಲ್ ಸಂತೋಷ್ ಸ್ವಾಗತಿಸಿ, ವಂದಿಸಿದರು. (ಕೆಸಿಐ,ಎಸ್.ಎಚ್)

Leave a Reply

comments

Related Articles

error: