ಕರ್ನಾಟಕ

ರಾಷ್ಟ್ರೀಕೃತ ಬ್ಯಾಂಕ್ ಗಳಲ್ಲಿ ರೈತರ ಸಾಲ ಮನ್ನಾ ಮಾಡುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿದ್ದವರ ಬಂಧನ,ಬಿಡುಗಡೆ

ರಾಜ್ಯ(ತುಮಕೂರು)ಜೂ.26:- ರಾಷ್ಟ್ರೀಕೃತ ಬ್ಯಾಂಕ್ ಗಳಲ್ಲಿ ರೈತರ ಸಾಲ ಮನ್ನಾ ಮಾಡುವಂತೆ ಹಾಗೂ ಮಧ್ಯಪ್ರದೇಶದ ರೈತರ ಮೇಲಿನ ಗೋಲಿಬಾರ್‌  ವಿರೋಧಿಸಿ ರೈಲು ತ‌ಡೆದು ಪ್ರತಿಭಟನೆ ಮಾಡಲು ರೈಲ್ವೆ ನಿಲ್ದಾಣಕ್ಕೆ ನುಗ್ಗಿದ ಜಿಲ್ಲಾ ಕಾಂಗ್ರೆಸ್‌ನ ಕಿಸಾನ್ ಘಟಕದ ಕಾರ್ಯಕರ್ತರನ್ನು ಪೊಲೀಸರು ತಡೆದು ಬಂಧಿಸಿದರು.
ಜಿಲ್ಲಾ ಕಾಂಗ್ರೆಸ್ ಘಟಕ ಮತ್ತು ಕಾಂಗ್ರೆಸ್ ಕಿಸಾನ್ ಘಟಕದ ವತಿಯಿಂದ ನೂರಾರು ಕಾರ್ಯಕರ್ತರು ಸೇರಿ ನಗರದ ರೈಲ್ವೆ ನಿಲ್ದಾಣದ ಬಳಿ ಮಧ್ಯಪ್ರದೇಶದಲ್ಲಿ ಬೇಡಿಕೆಗಾಗಿ ಮಾಡುತ್ತಿರುವ ಹೋರಾಟ ನ್ಯಾಯಸಮ್ಮತವಾದುದು, ಆದರೆ ಹೋರಾಟ ಮಾಡುತ್ತಿದ್ದ ರೈತರ ಮೇಲೆ ಗೋಲಿಬಾರ್ ಮಾಡಿರುವುದು ಖಂಡನೀಯ ಎಂದು ವಿರೋಧ ವ್ಯಕ್ತಪಡಿಸಿದರು. ಕಾಂಗ್ರೆಸ್ ಕಿಸಾನ್ ಘಟಕದ ರಾಜ್ಯಾಧ್ಯಕ್ಷ ಮಾತನಾಡಿ, ರಾಜ್ಯ ಸರ್ಕಾರ ರೈತರ ಸಾಲ ಮನ್ನಾ ಮಾಡಿರುವ ಸಿಎಂ ಸಿದ್ದರಾಮಯ್ಯ ಅವರಿಗೆ ಅಭಿನಂದನೆ ಸಲ್ಲಿಸುವುದಾಗಿ ತಿಳಿಸಿದರು. ರಾಜ್ಯ ಸರ್ಕಾರವು ರೈತರ ಸಾಲವನ್ನು 50 ಸಾವಿರ ರೂ.ವರೆಗೆ ಮನ್ನಾ ಮಾಡಿದೆ. ಇದು ಬರಿ ಜೆಡಿಎಸ್ ಮತ್ತು ಬಿಜೆಪಿ ಪಕ್ಷದವರು ಮಾಡಿದ ಪ್ರತಿಭಟನೆಗೆ, ವಿರೋಧಕ್ಕೆ ಅಲ್ಲ ಕೇವಲ ರಾಜ್ಯದಲ್ಲಿನ ರೈತರ ಸಮಸ್ಯೆಯನ್ನು ದೃಷ್ಟಿಯಲ್ಲಿ ಇಟ್ಟುಕೊಂಡು ಅಥವಾ ರೈತರು ಹುತಾತ್ಮರಾಗಿದ್ದಾರೆ. ಇವರ ಪ್ರತಿಫಲವಾಗಿ ಸರ್ಕಾರ ರೈತರ ಸಾಲವನ್ನು ಮನ್ನಾ ಮಾಡಲಾಗಿದೆ. ಆದರೆ ವಿರೋಧ ಪಕ್ಷಗಳು ರೈತರ ಎಲ್ಲ ಸಾಲವನ್ನು ಮನ್ನಾ ಮಾಡಲಾಗಿದೆ. ಆದರೆ ವಿರೋಧ ಪಕ್ಷಗಳು ರೈತರ ಎಲ್ಲ ಸಾಲವನ್ನು ಮನ್ನಾ ಮಾ‌ಡಬೇಕು ಎಂದು ಹೇಳುತ್ತಿರುವುದು ನಾಚಿಕೆಗೇಡಿನ ಸಂಗತಿ ಎಂದರು.

ದಲಿತರ ಮನೆಗೆ ಹೋಗುವುದು, ಅವರ ಮನೆಯಲ್ಲಿ ಊಟ ಮಾಡುವುದು ಹೀಗೆ ಮಾಡುವುದನ್ನು ಬಿಟ್ಟು ರೈತರ, ದಲಿತರ ಮೇಲೆ ಕಾಳಜಿ ಇದ್ದರೆ ಕೇಂದ್ರ ಸರ್ಕಾರ ಮತ್ತ ರಾಜ್ಯ ಸರ್ಕಾರದ ಮುಖಾಂತರ ಸಮಸ್ಯೆಯನ್ನು ಬಗೆಹರಿಸಬೇಕು. ಅದನ್ನು ಬಿಟ್ಟು ಬರ ಪ್ರವಾಸ ಎಂದು ರಾಜ್ಯವೆಲ್ಲ ತಿರುಗಿದರೆ ಏನು ಪ್ರಯೋಜನ. ನಿಮಗೆ ತಾಕತ್ತಿದ್ದರೆ ರಾಜ್ಯದಲ್ಲಿ ಹಲವು ಸಮಸ್ಯೆಗಳು ಇವೆ, ಅವುಗಳನ್ನು ಹಿಡಿದು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಬೇಕು. ವಿರೋಧ ಪಕ್ಷಗಳು ಇಲ್ಲಸಲ್ಲದ ಮಾತುಗಳನ್ನು ಆಡುತ್ತಾ ಬೊಬ್ಬೆ ಹೊಡೆಯುವುದಕ್ಕಿಂತ ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ರೈತರು ಮಾಡಿರುವ ಸಾಲವನ್ನು ಮನ್ನಾ ಮಾಡುವಂತೆ ಕೇಂದ್ರ ಸರ್ಕಾರದ ಕಿವಿ ಹಿಂಡಿ ರೈತರ ಸಾಲಮನ್ನಾ ಮಾಡಿಸಲಿ ಎಂದರು.
ಕಾಂಗ್ರೆಸ್ ಜಿಲ್ಲಾಧ್ಯಕ್ಷ ಆರ್. ರಾಮಕೃಷ್ಣ ಮಾತನಾಡಿ, ಕಾಂಗ್ರೆಸ್ ಸರ್ಕಾರ ರೈತರ ಪರವಾಗಿದ್ದು, ರೈತರ ಸಹಕಾರಿ ಬ್ಯಾಂಕ್‌ಗಳಲ್ಲಿನ 50 ಸಾವಿರ ಅಲ್ಪಾವಧಿ ಸಾಲ ಮನ್ನಾ ಮಾಡಲಾಗಿದೆ ಎಂದರು. ಕೇಂದ್ರ ಸರ್ಕಾರ ರೈತರ ಸಾಲ ಮನ್ನಾ ಮಾಡಲು ಸಹಕಾರ ನೀಡದಿದ್ದರೂ ಸಹ ರೈತರು ಕೃಷಿ ಸಾಲವನ್ನು ಹೆಚ್ಚು ಸಹಕಾರಿ ಬ್ಯಾಂಕುಗಳಲ್ಲೇ ಮಾಡಿರುವುದನ್ನು ಗಮನಿಸಿ ಮನ್ನಾ ಮಾಡಲಾಗಿದೆ. ಈಗಲಾದರೂ ಕೇಂದ್ರ ಸರ್ಕಾರ ರೈತರ ಸಮಸ್ಯೆಯನ್ನು ಗಮನದಲ್ಲಿಟ್ಟುಕೊಂಡು ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿನ ರೈತರ ಸಾಲವನ್ನು ಮನ್ನಾ ಮಾಡಬೇಕು. ಇತ್ತೀಚೆಗೆ ಸಾಲ ಮನ್ನಾ ಎಂದರೆ ಫ್ಯಾಷನ್ ಆಗಿ ಬಿಟ್ಟಿದೆ ಎಂದು ವೆಂಕಯ್ಯನಾಯ್ಡು ತಿಳಿಸಿದ್ದಾರೆ. ಬರಗಾಲದಿಂದ ತತ್ತರಿಸಿ ಸಾಲ ತೀರಿಸಲು ಆಗದ ಪರಿಸ್ಥಿತಿ ಎದುರಾಗಿದೆ. ಆದ್ದರಿಂದ ರೈತರ ಸಾಲ ಮನ್ನಾ ಮಾಡುವುದನ್ನು ಬಿಟ್ಟು ಸಾಲ ಮನ್ನಾ ಫ್ಯಾಷನ್ ಎನ್ನುವುದು ಎಷ್ಟುಸರಿಎಂದು ಪ್ರಶ್ನಿಸಿದರು. ರೈಲು ತಡೆದು ಪ್ರತಿಭಟನೆ ಮಾಡಲು ಮುಂದಾದ ಕಾಂಗ್ರೆಸ್ ಕಿಸಾನ್ ಘಟಕದ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿ ನಂತರ ಬಿಡುಗಡೆ ಮಾಡಿದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: