ಪ್ರಮುಖ ಸುದ್ದಿಮೈಸೂರು

ಸಿಎಂ ಸಿದ್ದರಾಮಯ್ಯ ಸುತ್ತೂರು ಮಠಕ್ಕೆ ಭೇಟಿ

ಮೈಸೂರು ದಸರಾದ ಜಂಬೂಸವಾರಿ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಮಂಗಳವಾರ ಸುತ್ತೂರು ಮಠಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು.

ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿ, ರಾಜ್ಯದಲ್ಲಿ ಈ ಬಾರಿ ಮಳೆಯಿಲ್ಲದೆ ಬರಗಾಲ ಸೃಷ್ಟಿಯಾಗಿದೆ. ಇಂತಹ ಸಂದರ್ಭದಲ್ಲಿ ನಾವು ದಸರಾ ಆಚರಿಸಬೇಕಾದ ಅನಿವಾರ್ಯತೆ ಇದೆ. ಹಿಂಗಾರು ಮಳೆಯಾದರೂ ಚೆನ್ನಾಗಿ ಆಗಲಿ ಎಂದು ತಾಯಿ ಚಾಮುಂಡೇಶ್ವರಿ ಬಳಿ ದಸರಾ ಉದ್ಘಾಟನೆ ಸಂದರ್ಭ ಬೇಡಿಕೊಂಡಿದ್ದೆ. ಜಂಬೂ ಸವಾರಿಯ ಸಂದರ್ಭದಲ್ಲೂ ತಾಯಿಯ ಬಳಿ ಇದನ್ನೇ ಬೇಡಿಕೊಳ್ಳುತ್ತೇನೆ ಎಂದು ಹೇಳಿದರು.

ಸುತ್ತೂರು ಮಠಕ್ಕೆ ಆಗಮಿಸಿದ ಸಿಎಂ ಸಿದ್ದರಾಮಯ್ಯ ಅವರನ್ನು ವಾದ್ಯತಂಡಗಳು ಬರಮಾಡಿಕೊಂಡವು. ಸುತ್ತೂರು ಶ್ರೀಗಳೊಂದಿಗೆ ಉಭಯ ಕುಶಲೋಪರಿ ವಿಚಾರಿಸಿದ ಅವರು ಸಚಿವರೊಂದಿಗೆ ಮಠದಲ್ಲಿಯೇ ಉಪಹಾರ ಸೇವಿಸಿದರು.

ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ. ಮಹದೇವಪ್ಪ, ಸಕ್ಕರೆ ಮತ್ತು ಸಹಕಾರ ಸಚಿವ ಮಹದೇವಪ್ರಸಾದ್ ಮತ್ತು ಇತರರು ಉಪಸ್ಥಿತರಿದ್ದರು.

Leave a Reply

comments

Related Articles

error: