ಪ್ರಮುಖ ಸುದ್ದಿ

ಸಿಲಿಂಡರ್ ಸ್ಪೋಟ: ಐವರು ಸಾವು

ಪ್ರಮುಖ ಸುದ್ದಿ, ನವದೆಹಲಿ, ಜೂ.24: ಸಿಲಿಂಡರ್ ಸ್ಪೋಟಗೊಂಡು ಐವರು ಸಾವನ್ನಪ್ಪಿ 9 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ದಕ್ಷಿಣ ದೆಹಲಿಯ ಓಕ್ಲಾ ಪ್ರದೇಶದ ಮದುವೆ ಮನೆಯಲ್ಲಿ ನಡೆದಿದೆ.

ಗುರುವಾರ ನಿಗದಿಯಾಗಿದ್ದ ಮದುವೆ ಸಮಾರಂಭಕ್ಕಾಗಿ ನೆಂಟರಿಷ್ಟರು ಸೇರಿದ್ದ ವೇಳೆ ಈ ಭೀಕರ ಅವಘಡ ಸಂಭವಿಸಿದೆ. ಮೃತರಲ್ಲಿ ಮೂವರು ಮಹಿಳೆಯರು, ಮಗು ಮತ್ತು ಓರ್ವ ಪುರುಷ ಸೇರಿದ್ದಾರೆ. ಗಾಯಾಳುಗಳನ್ನು ಇಎಸ್‌ಐ ಮತ್ತು ಸಫ್ದರ್‌ಜಂಗ್‌ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆಯಲ್ಲಿ ಇಬ್ಬರು ಸ್ಥಳದಲ್ಲೇ ಸಜೀವ ದಹನಗೊಂಡರೆ, ಗಂಭೀರವಾಗಿ ಸುಟ್ಟ ಗಾಯಗಳಿಗೊಳಗಾಗಿದ್ದ ಮೂವರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.  (ವರದಿ ಬಿ.ಎಂ)

Leave a Reply

comments

Related Articles

error: