ಕರ್ನಾಟಕಪ್ರಮುಖ ಸುದ್ದಿ

ಸಿಎಂ ಅವರದ್ದು ತೊಘಲಕ್ ದರ್ಬಾರ್ : ಬಿ ಎಸ್ ವೈ

ರಾಜ್ಯ, (ಬಳ್ಳಾರಿ) ಜೂ.27: ರಾಜ್ಯದ ಸಂಸದರು ವಿಧಾನಸಭೆಗೆ ಸ್ಪರ್ಧಿಸಬೇಕು ಎನ್ನುವ ಆಶಯ ಇದೆ. ಆದರೆ ಹೈಕಮಾಂಡ್ ಈ ಬಗ್ಗೆ ನಿರ್ಧಾರ ಕೈಗೊಳ್ಳಲಿದೆ ಎಂದು ಬಿಜೆಪಿ ರಾಜಾಧ್ಯಕ್ಷ ಬಿಎಸ್ ಯಡಿಯೂರಪ್ಪ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಮಂಗಳವಾರ ಬಳ್ಳಾರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, ಅನ್ನಭಾಗ್ಯ ಯೋಜನೆ ರಾಜ್ಯ ಸರ್ಕಾರದ್ದಲ್ಲ. ನ್ಯಾಯಬೆಲೆ ಅಂಗಡಿಗಳ ಮುಂದೆ ಪ್ರಧಾನಿ ಭಾವಚಿತ್ರ ಹಾಕಬೇಕು ಎಂದು ಹೇಳಿದರು.

ನುಡಿದಂತೆ ನಡೆದ ಸರ್ಕಾರ ನೀರಾವರಿ ಯೋಜನೆಗಳಿಗೆ ಹಣ ನೀಡಲಿಲ್ಲ.  ಜನರಿಗೆ ಮೋಸ, ವಂಚನೆ ಮಾಡುವುದರಲ್ಲಿ ಸಿಎಂ ಸಿದ್ದರಾಮಯ್ಯ  ನಿಸ್ಸೀಮರು. ಭ್ರಷ್ಟಾಚಾರದಲ್ಲಿ ಕರ್ನಾಟಕ ನಂಬರ್ ಒನ್ ಆಗಿದೆ. ರಾಜ್ಯ ಸರ್ಕಾರ ಹಗರಣದ ಸುಳಿಯಲ್ಲಿ ಸಿಲುಕಿದೆ.  1.28.361 ಕೋಟಿ ಸಾಲ ಮಾಡಿದ್ದಾರೆ. ಇದು ಸಿಎಂ ಸಾಧನೆಯಾಗಿದೆ ಎಂದು ವ್ಯಂಗ್ಯವಾಡಿದರು. ಅಭಿವೃದ್ಧಿಗೆ  ಗ್ರಹಣ ಹಿಡಿದಿದೆ. ಸಿಎಂ ತೊಘಲಕ್ ದರ್ಬಾರ್ ನಡೆಸುತ್ತಿದ್ದಾರೆ ಎಂದರು.

ಟಿಕೆಟ್ ಹಂಚಿಕೆ ವಿಚಾರದ ಬಗ್ಗೆ ಸದ್ಯಕ್ಕೆ ಚರ್ಚೆ ಮಾಡಲ್ಲ. ಟಿಕೆಟ್ ಹಂಚಿಕೆಗೆ ಅಮಿತ್  ಷಾ ಮತ್ತು ರಾಜ್ಯ ಘಟಕದಿಂದಲೂ ಸಮೀಕ್ಷೆ ಮಾಡಿ ಜನರ ಅಭಿಪ್ರಾಯ ಪಡೆದು ಅಭ್ಯರ್ಥಿಯನ್ನು ಆಯ್ಕೆ ಮಾಡಲಾಗುವುದು. ರಾಯಣ್ಣ  ಬ್ರಿಗೇಡ  ಚಟುವಟಿಕೆಗಳನ್ನು ನಿಲ್ಲಿಸಿದ್ದೇವೆ ಎಂದು ಪ್ರಮುಖರು ಸ್ಪಷ್ಟಪಡಿಸಿದ್ದಾರೆ ಎಂದು ತಿಳಿಸಿದರು.

ಉಡುಪಿಯ ಇಫ್ತಿಯಾರ ಕೂಟದ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಲ್ಲ ಎಂದರು. (ವರದಿ: ಎಸ್.ಎನ್, ಎಲ್.ಜಿ)

Leave a Reply

comments

Related Articles

error: