ಕರ್ನಾಟಕಪ್ರಮುಖ ಸುದ್ದಿಮೈಸೂರು

ನಂದೀಧ್ವಜಕ್ಕೆ ಪೂಜೆ ಸಲ್ಲಿಸಿದ ಸಿಎಂ: ಸ್ತಬ್ಧ ಚಿತ್ರಗಳ ಮೂಲಕ ಕಲೆ-ಸಂಸ್ಕೃತಿಯ ಅನಾವರಣ

ವಿಶ್ವ ಪ್ರಸಿದ್ಧ ಮೈಸೂರು ದಸರಾ ಉತ್ಸವದ ಪ್ರಮುಖ ಆಕರ್ಷಣೆಯಾದ ಜಂಬೂಸವಾರಿ ಮೆರವಣಿಗೆಗೆ ಚಾಲನೆ ನೀಡುವ ಮೊದಲು ಅರಮನೆಯ ಬಲರಾಮ ದ್ವಾರದಲ್ಲಿ ಮಂಗಳವಾರ ಮಧ್ಯಾಹ್ನ 2.16 ರ ಮಕರ ಲಗ್ನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸುರಿಯುತ್ತಿರುವ ಮಳೆಯಲ್ಲಿಯೇ ನಂದೀಧ್ವಜಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಪೂಜೆ ನೆರವೇರಿಸಿದರು.

ನಂತರ ತೆರೆದ ವಾಹನದಲ್ಲಿ ತೆರಳಿದ ಮುಖ್ಯಮಂತ್ರಿಗಳು ಸಾರ್ವಜನಿಕರತ್ತ ಕೈಬೀಸಿ ದಸರಾ ಶುಭಾಶಯ ತಿಳಿಸಿದರು. ಇದೀಗ ವಿವಿಧ ಜಿಲ್ಲೆಗಳಿಂದ ಆಗಮಿಸಿದ ಸ್ತಬ್ಧಚಿತ್ರಗಳ ಮೆರವಣಿಗೆಗೆ ಚಾಲನೆ ದೊರಕಿದ್ದು, ವಿವಿಧ ಜಿಲ್ಲೆಗಳ ಸಂಸ್ಕೃತಿ ಹಾಗೂ ಕಲೆಗಳು  ಅನಾವರಣಗೊಂಡಿವೆ.

ಈ ವೇಳೆ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ, ಮೇಯರ್ ಬಿ.ಎಲ್.ಭೈರಪ್ಪ, ಜಿಲ್ಲಾಧಿಕಾರಿ ಡಿ.ರಂದೀಪ್, ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಉಪಸ್ಥಿತರಿದ್ದರು.

ವೀರಗಾಸೆ, ಸುಗ್ಗಿ ಕುಣಿತ, ನಾದಸ್ವರ, ನಂದಿಕೋಲು, ಕೀಲುಕುದುರೆ, ಗಾರುಡಿಗೊಂಬೆ, ವಾದ್ಯವೃಂದ  ಸೇರಿದಂತೆ ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿದ ವಿವಿಧ ಜಾನಪದ ತಂಡಗಳು ತಮ್ಮ ಕಲೆಯನ್ನು ಪ್ರಸ್ತುತಪಡಿಸಿವೆ.

Leave a Reply

comments

Related Articles

error: