ಮೈಸೂರು

ಜೂ.28 ರಿಂದ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ: ಪರೀಕ್ಷಾ ಕೇಂದ್ರದ ಸುತ್ತ ನಿಷೇಧಾಜ್ಞೆ

ಮೈಸೂರು,ಜೂ.27-ನಗರದಲ್ಲಿ ಒಟ್ಟು 7 ಪರೀಕ್ಷಾ ಕೇಂದ್ರಗಳಲ್ಲಿ ದ್ವಿತೀಯ ಪಿ.ಯು.ಸಿ ಪೂರಕ ಪರೀಕ್ಷೆಗಳು ನಡೆಯಲಿದೆ. ಈ ಹಿನ್ನೆಲೆಯಲ್ಲಿ ಪರೀಕ್ಷಾ ಕೇಂದ್ರದ ಸುತ್ತ ಕಲಂ 144 ಸಿ.ಆರ್.ಪಿ.ಸಿ ರೀತ್ಯ ನಿಷೇಧಾಜ್ಞೆ ಜಾರಿಗೊಳಿಸಲಾಗುವುದು.

ಜೂ.28 ರಿಂದ ಜುಲೈ 8 ರವರೆಗೆ (ರಜಾ ದಿನಗಳನ್ನು ಹೊರತು ಪಡಿಸಿ) ಪರೀಕ್ಷಾ ಕೇಂದ್ರಗಳ 200 ಮೀಟರ್ ವ್ಯಾಪ್ತಿ ಪ್ರದೇಶದ ಸುತ್ತಲೂ ಬೆಳಿಗ್ಗೆ 6 ರಿಂದ ಸಂಜೆ 6 ರವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗುವುದು ಎಂದು ನಗರ ಪೊಲೀಸ್ ಆಯುಕ್ತ ಡಾ.ಎ.ಸುಬ್ರಹ್ಮಣ್ಯೇಶ್ವರರಾವ್ ತಿಳಿಸಿದ್ದಾರೆ.

ಪರೀಕ್ಷಾ ಕೇಂದ್ರಗಳ ಸುತ್ತಲೂ ಇರುವ ಜೆರಾಕ್ಸ್ ಅಂಗಡಿಗಳನ್ನು ಪರೀಕ್ಷಾ ಸಮಯದಲ್ಲಿ ಮುಚ್ಚುವಂತೆ ಆದೇಶಿಸಲಾಗಿದೆ. ಶಾರದಾ ವಿಲಾಸ ಪದವಿಪೂರ್ವ ಕಾಲೇಜು, ಸಂತ ಫಿಲೋಮಿನಾ ಪದವಿಪೂರ್ವ ಕಾಲೇಜು, ಡಿ.ಬನುಮಯ್ಯ ಪದವಿಪೂರ್ವ ಕಾಲೇಜು, ಮಹಾರಾಜ ಸರ್ಕಾರಿ ಪದವಿಪೂರ್ವ ಕಾಲೇಜು,  ಎಸ್.ಬಿ.ಆರ್.ಆರ್. ಮಹಾಜನ ಪದವಿಪೂರ್ವ ಕಾಲೇಜು, ಜೆ.ಎಸ್.ಎಸ್.ಪದವಿಪೂರ್ವ ಕಾಲೇಜು, ಮಹಾರಾಣಿ ಸರ್ಕಾರಿ ಪದವಿಪೂರ್ವ ಕಾಲೇಜುಗಳಲ್ಲಿ ಪೂರಕ ಪರೀಕ್ಷೆಗಳು ನಡೆಯಲಿದೆ. (ವರದಿ-ಎಂ.ಎನ್)

 

Leave a Reply

comments

Related Articles

error: