ಮೈಸೂರು

ಸಂಸದ ಪ್ರತಾಪ್ ಸಿಂಹ ಹೇಳಿಕೆ ಖಂಡಿಸಿ ದಲಿತ ವಿದ್ಯಾರ್ಥಿ ಒಕ್ಕೂಟದ ವತಿಯಿಂದ ಪ್ರತಿಭಟನೆ

ಮೈಸೂರು,ಜೂ27:-ಪ್ರತಾಪ್ ಸಿಂಹ ಹೇಳಿಕೆ ಖಂಡಿಸಿ ದಲಿತ ವಿದ್ಯಾರ್ಥಿ ಒಕ್ಕೂಟದ ವತಿಯಿಂದ  ಪ್ರತಿಭಟನೆ ನಡೆಯಿತು.

ಮಾನಸ ಗಂಗೋತ್ರಿ ಕ್ಲಾಕ್ ಟವರ್ ಬಳಿ ಸೇರಿದ ಪ್ರತಿಭಟನಾಕಾರರು ಪ್ರತಾಪ್ ಸಿಂಹ ವಿರುದ್ಧ ಆಕ್ರೋಶವ್ಯಕ್ತಪಡಿಸಿದರು. ಪ್ರತಾಪ್ ಸಿಂಹ ಗೋಮಾಂಸ ತಿನ್ನುವ ಬದಲು ನಾಯಿ ತಿನ್ನಿ ಹೇಳಿರುವುದನ್ನು ವಿರೋಧಿಸಿ ಪ್ರತಿಭಟನೆ ನಡೆಸಿದರು. ಮಹೇಶ್ ಚಂದ್ರ ಗುರು ಅವರನ್ನು ಪ್ರಾಧ್ಯಾಪಕ ಹುದ್ದೆಯಿಂದ ವಜಾಗೊಳಿಸಿ ಎಂದು ರಾಜ್ಯಪಾಲರಿಗೆ ಸಂಸದ ಪ್ರತಾಪ್ ಸಿಂಹ ಮತ್ತು, ಸಂಸದೆ ಶೋಭಾ ಕರಂದ್ಲಾಜೆ ಪತ್ರ ಬರೆದಿರುವುದರ ಕುರಿತಂತೆ ಆಕ್ಷೇಪ ವ್ಯಕ್ತಪಡಿಸಿದರು. ಈ ಸಂದರ್ಭ ಮಾತನಾಡಿದ ಪ್ರತಿಭಟನಾಕಾರರು
ಬಹುಸಂಖ್ಯಾತರ ಆಹಾರ ಪದ್ಧತಿಗೆ ಕಡಿವಾಣ ಹಾಕುವುದು ಸರಿಯಲ್ಲ.ಕೂಡಲೇ ಗೋಮೂತ್ರ ಹಾಕಿ ಸ್ವಚ್ಛಮಾಡಿದ ಬಿಜೆಪಿ ಕಾರ್ಯಕರ್ತರು,ಸಂಸದ ಪ್ರತಾಪ್ ಸಿಂಹ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ಪ್ರತಿಭಟನೆಯಲ್ಲಿ 50ಕ್ಕೂ ಅಧಿಕ ಮಂದಿ ಪಾಲ್ಗೊಂಡಿದ್ದರು.(ಕೆ.ಎಸ್,ಎಸ್.ಎಚ್)

Leave a Reply

comments

Related Articles

error: