ಕರ್ನಾಟಕ

ರವಿ ಬೆಳಗೆರೆ ಅವರ ಆರೋಗ್ಯ ವಿಚಾರಿಸಿದ ಪ್ರಕಾಶ್ ರೈ

ಹುಬ್ಬಳ್ಳಿ,ಜೂ.27-ಅನಾರೋಗ್ಯ ನಿಮಿತ್ತ ಆಸ್ಪತ್ರೆಗೆ ದಾಖಲಾಗಿರುವ ಪತ್ರಕರ್ತ ರವಿ ಬೆಳಗೆರೆ ಅವರನ್ನು ನಟ ಪ್ರಕಾಶ್ ರೈ ಭೇಟಿಯಾಗಿ ಆರೋಗ್ಯ ವಿಚಾರಿಸಿದರು.

ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಾಗಿರುವ ರವಿ ಅವರನ್ನು ಭೇಟಿಯಾದ ಪ್ರಕಾಶ್ ರೈ ರವಿ ಬೆಳಗೆರೆ ಅವರೊಂದಿಗೆ ಸುಮಾರು ಅರ್ಧ ಗಂಟೆಗೂ ಹೆಚ್ಚು ಕಾಲ ಮಾತುಕತೆಯಾಡಿದ್ದಾರೆ.

ಕಿಮ್ಸ್ ಆಸ್ಪತ್ರೆಯ ಕಾರ್ಡಿಯಾಲಾಜಿ ವಿಭಾಗದಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿರುವ ರವಿ ಅವರನ್ನು ಪೊಲೀಸರು ಬಂಧಿಸಿದ್ದು, ಅನಾರೋಗ್ಯ ನಿಮಿತ್ತ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದಾರೆ. ಬೆಂಗಳೂರು ಪೊಲೀಸರು ಆಸ್ಪತ್ರೆಯಲ್ಲೇ ಮೊಕ್ಕಂ ಹೂಡಿದ್ದಾರೆ. (ವರದಿ-ಎಸ್.ಎನ್, ಎಂ.ಎನ್)

Leave a Reply

comments

Related Articles

error: