ಪ್ರಮುಖ ಸುದ್ದಿ

ರಾಷ್ಟ್ರಪತಿ ಚುನಾವಣೆ: ಇಂದು ಮೀರಾ ಕುಮಾರ್ ನಾಮಪತ್ರ ಸಲ್ಲಿಕೆ

ಪ್ರಮುಖ ಸುದ್ದಿ, ನವದೆಹಲಿ, ಜೂ.28: ರಾಷ್ಟ್ರಪತಿ ಚುನಾವಣೆಗೆ ವಿರೋಧ ಪಕ್ಷದ ಅಭ್ಯರ್ಥಿಯಾಗಿರುವ ಮೀರಾ ಕುಮಾರ್ ಇಂದು ನಾಮಪತ್ರ ಸಲ್ಲಿಸಲಿದ್ದಾರೆ.

ಜು.17ರಂದು ನಡೆಯಲಿರುವ ರಾಷ್ಟ್ರಪತಿ ಚುನಾವಣೆಯ ನಾಮಪತ್ರ ಸಲ್ಲಿಕೆಗೆ ಇಂದೇ ಕೊನೆಯ ದಿನವಾಗಿದ್ದು, ಬೆಳಗ್ಗೆ 11.30ರ ವೇಳೆಗೆ ಲೋಕಸಭೆಯ ಪ್ರಧಾನ ಕಾರ್ಯದರ್ಶಿ ಬಳಿ ನಾಮಪತ್ರ ಸಲ್ಲಿಸಲಿದ್ದಾರೆ. ಮೀರಾ ಅವರಿಗೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ಸಿಪಿಐಎಂ ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ ಸೇರಿದಂತೆ ಪ್ರತಿಪಕ್ಷಗಳ ಅನೇಕ ನಾಯಕರು ಸಾಥ್ ನೀಡಲಿದ್ದಾರೆ.

ಕೋವಿಂದ್ ಸೇರಿದಂತೆ ಇದುವರೆಗೆ 24 ನಾಮಪತ್ರ ಸಲ್ಲಿಕೆಯಾಗಿವೆ. ಆದರೆ, ಕೋವಿಂದ್ ಅವರನ್ನು ಹೊರತುಪಡಿಸಿ ಉಳಿದವರ ನಾಮಪತ್ರಕ್ಕೆ ಸೂಚಕರೇ ಇಲ್ಲದ ಕಾರಣ ಎಲ್ಲವೂ ತಿರಸ್ಕೃತವಾಗಲಿವೆ ಎಂದು ಹೇಳಲಾಗುತ್ತಿದೆ. ಮೀರಾ ಹಾಗೂ ಕೋವಿಂದ್ ನಡುವೆ ನೇರ ಸ್ಪರ್ಧೆ ನಡೆಯಲಿದ್ದು, ಯಾರಿಗೆ ವಿಜಯಮಾಲೆ ಒಲಿಯಲಿದೆ ಕಾದು ನೋಡಬೇಕು. (ವರದಿ ಬಿ.ಎಂ)

 

Leave a Reply

comments

Related Articles

error: