ಮೈಸೂರು

ಸಾಲಬಾಧೆಗೆ ರೈತ ಬಲಿ

ಮೈಸೂರು,ಜೂ.28-ಸಾಲಬಾಧೆ ತಾಳಲಾರದೆ ರೈತನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಜಯಪುರ ಹೋಬಳಿಯ ಗುಜ್ಜೇಗೌಡನಪುರ ಗ್ರಾಮದಲ್ಲಿ ನಡೆದಿದೆ.

ಕರಿಶೆಟ್ಟಿ (40) ಆತ್ಮಹತ್ಯೆ ಮಾಡಿಕೊಂಡ ರೈತ. 4 ಲಕ್ಷ ರೂ. ಸಾಲ ಮಾಡಿ ಕೃಷಿ ಚಟುವಟಿಕೆಗೆ ವಿನಿಯೋಗ ಮಾಡಿದ್ದ. ಆದರೆ ಜಮೀನಿನಲ್ಲಿ ಬೆಳೆದಿದ್ದ ಫಸಲಿನ ನಷ್ಟದಿಂದ ಸಾಲಬಾಧೆಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಮೃತ ರೈತನಿಗೆ ಪತ್ನಿ ಹಾಗೂ ಮೂವರು ಮಕ್ಕಳಿದ್ದರು. (ವರದಿ-ಆರ್.ವಿ, ಎಂ.ಎನ್)

Leave a Reply

comments

Related Articles

error: