ಕರ್ನಾಟಕಪ್ರಮುಖ ಸುದ್ದಿ

ರಾಷ್ಟ್ರಪತಿ ಚುನಾವಣೆ : ವಿಪಕ್ಷ ಮೈತ್ರಿಕೂಟ ಅಭ್ಯರ್ಥಿ ಮೀರಾಕುಮಾರ್ ನಾಮಪತ್ರ ಸಲ್ಲಿಕೆ

ನವದೆಹಲಿ, ಜೂ.28 : ವಿಪಕ್ಷಗಳ ವತಿಯಿಂದ ರಾಷ್ಟ್ರಪತಿ ಹುದ್ದೆ ಚುನಾವಣೆಗಾಗಿ ಒಮ್ಮತದ ಅಭ್ಯರ್ಥಿಯಾಗಿ ಮಾಜಿ ಸ್ಪೀಕರ್ ಮೀರಾ ಕುಮಾರ್ ಅವರು ಇಂದು ನಾಮಪತ್ರ ಸಲ್ಲಿಸಿದರು.

17 ವಿಪಕ್ಷಗಳ ಒಮ್ಮತದ ಅಭ್ಯರ್ಥಿಯಾಗಿರುವ ಮೀರಾ ಕುಮಾರ್ ಅವರು ನಾಮಪತ್ರ ಸಲ್ಲಿಸುವ ವೇಳೆ ಕಾಂಗ್ರೆಸ್ ವರಿಷ್ಠೆ ಸೋನಿಯಾ ಗಾಂಧಿ, ಮಾಜಿ ಪ್ರಧಾನಿ ಮನಮೋಹನ್ ಸಿಂಗ್, ಎನ್‍ಸಿಪಿಯ ಶರದ್ ಪವಾರ್, ಲೋಕಸಭೆ ಕಾಂಗ್ರೆಸ್‍ ನಾಯಕ ಮಲ್ಲಿಕಾರ್ಜುನ ಖರ್ಗೆ, ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ, ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್, ಮಾವೋವಾದಿ ಕಮ್ಯೂನಿಸ್ಟ್ ಪಕ್ಷದ ಸೀತಾರಾಂ ಯೆಚೂರಿ, ಓಮರ್ ಅಬ್ದುಲ್ಲಾ ಮೊದಲಾದ ನಾಯಕರ ಉಪಸ್ಥಿತರಿದ್ದರು.

ಮೀರಾ ಕುಮಾರ್ ಅವರು ಕೇಂದ್ರ ಸಚಿವೆಯಾಗಿ, ಲೋಕಸಭಾ ಸ್ಪೀಕರ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. ಇವರು ಮಾಜಿ ಉಪಪ್ರಧಾನಿ ಬಾಬು ಜಗಜೀವನ್ ರಾಂ ಅವರ ಪುತ್ರಿಯಾಗಿದ್ದು, ಬಿಹಾರದ ದಲಿತ ಸಮುದಾಯದಿಂದ ಬಂದವರಾಗಿದ್ದಾರೆ. ಎನ್‍ಡಿಎ ಕೂಡ ದಲಿತ ಅಭ್ಯರ್ಥಿ ರಾಮನಾಥ್ ಕೋವಿಂದ್ ಅವರನ್ನು ಕಣಕ್ಕಿಣಿಳಿಸಿದೆ.

ಎನ್‍ಡಿಎ ಅಭ್ಯರ್ಥಿ ರಾಮನಾಥ್ ಕೋವಿಂದ್ ಅವರು ರಾಷ್ಟ್ರಪತಿ ಚುನಾವಣೆಗೆ ಜೂ. 23 ರಂದೇ ನಾಮಪತ್ರ ಸಲ್ಲಿಸಿದ್ದಾರೆ. ಜೂನ್ 28 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಜುಲೈ 1 ನಾಮಪತ್ರ ಹಿಂತೆಗೆದುಕೊಳ್ಳಲು ಕೊನೆಯ ದಿನವಾಗಿದ್ದು, ಜುಲೈ 17ರಂದು ಚುನಾವಣೆ ನಡೆಯಲಿದೆ. ಜೂನ್ 20ರಂದು ಮತ ಎಣಿಕೆ ನಡೆದು ಫಲಿತಾಂಶ ತಿಳಿಯಲಿದೆ.

-ಎನ್.ಬಿ.

Leave a Reply

comments

Related Articles

error: