ಮೈಸೂರು

ಜಿಲ್ಲಾ ಕಾಂಗ್ರೆಸ್ ನಲ್ಲಿ ರಾಜೀನಾಮೆ ಪರ್ವ : ಎಂ.ಶಿವರಾಜು ರಾಜೀನಾಮೆ

ಮೈಸೂರು.ಜೂ.28 : ಸಿಎಂ ಸಿದ್ದರಾಮಯ್ಯನವರ ಪಕ್ಷಪಾತ, ಗುಂಪುಗಾರಿಕೆ, ನಿರ್ಲಕ್ಷ್ಯೆ ಧೋರಣೆಯನ್ನು ಖಂಡಿಸಿ ಮೈಸೂರು ನಗರ (ಜಿಲ್ಲಾ) ಕಾಂಗ್ರೆಸ್ ಕಮಿಟಿ ಹಿಂದುಳಿದ ವರ್ಗಗಳ ಉಪಾಧ್ಯಕ್ಷ ಎಂ.ಶಿವರಾಜು ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿದರು.

ನಂತರ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿದ ಶಿವರಾಜು, ಕಾಂಗ್ರೆಸ್ ಪಕ್ಷದಲ್ಲಿ ಹಿರಿಯ ರಾಜಕಾರಣಿಗಳನ್ನು ಹಾಗೂ ಮೂಲ ಕಾಂಗ್ರೆಸಿಗರನ್ನು ನಿರ್ಲಕ್ಷಿಸುತ್ತಿದ್ದು ಮುಖ್ಯಮಂತ್ರಿಗಳ ಧೋರಣೆಯನ್ನು ಖಂಡಿಸಿ ಜಿಲ್ಲೆಯಲ್ಲಿ ಇನ್ನೂ ಕೆಲವು ಮುಖಂಡರು ಪಕ್ಷವನ್ನು ತೊರೆದು ವಿಶ್ವನಾಥ್ ಅವರನ್ನು ಬೆಂಬಲಿಸಿದ್ದೇವೆ ಎಂದು ತಿಳಿಸಿದರು.

ಮೈಸೂರು ನಗರ (ಜಿಲ್ಲಾ) ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ಅಧ್ಯಕ್ಷ ಸೋಮಸುಂದರ್ ರಾಜೀನಾಮೆ ನೀಡಿದ ಬೆನ್ನಲ್ಲೇ ಅವರನ್ನು ಬೆಂಬಲಿಸಿ ಸಾಹುಕಾರ್ ಚೆನ್ನಯ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಮೂರ್ತಿ, ಇಂದಿರಾಗಾಂಧಿ ಬ್ಲಾಕ್ ಅಧ್ಯಕ್ಷ ನಂಜುಂಡಸ್ವಾಮಿ, ಸಂಚಾಲಕ ಮುತ್ತುರಾಜ್ ಹಾಗೂ ಸಂಚಾಲಕಿ ಗಂಗಾ ರತ್ನ ಅವರುಗಳು ಸಾಮೂಹಿಕವಾಗಿ ಪಕ್ಷಕ್ಕೆ ರಾಜೀನಾಮೆ ಸಲ್ಲಿಸುವುದಾಗಿ ಘೋಷಿಸಿದರು.

ಕಳೆದ 40 ವರ್ಷಗಳಿಂದ ಶುದ್ಧ ರಾಜಕಾರಣ ನಡೆಸಿದ ಮಾಜಿ ಸಚಿವ ಹಾಗೂ ಜಿಲ್ಲೆಯ ಹಿರಿಯ ರಾಜಕಾರಣಿ ಅಡಗೂರು ವಿಶ್ವನಾಥ್ ಕಾಂಗ್ರೆಸ್ ಗೆ ರಾಜೀನಾಮೆ ನೀಡಿದ ಬೆನ್ನಲ್ಲೇ ಅವರ ಬೆಂಬಲಿಗರ ರಾಜೀನಾಮೆ ಪರ್ವ ಆರಂಭವಾಗಿದ್ದು ಇನ್ನೂ ಹಲವಾರು ನಾಯಕರು ಪಕ್ಷ ತೊರೆಯುವ ಸೂಚನೆಯನ್ನು ಸುದ್ದಿಗೋಷ್ಠಿಯಲ್ಲಿ ನೀಡಿದರು.(ವರದಿ : ಕೆ.ಎಂ.ಅರ್)

Leave a Reply

comments

Related Articles

error: