ಕರ್ನಾಟಕ

ಇಫ್ತಿಯಾರ್ ಕೂಟದ ಮೂಲಕ ಸಮಾಜ ಕಟ್ಟುವ ಕೆಲಸ ಮಾಡಿದ ಶ್ರೀಗಳು: ಐವನ್ ಡಿಸೋಜಾ

ಬೆಳಗಾವಿ,ಜೂ.28-ಉಡುಪಿ ಮಠದಲ್ಲಿ ಪೇಜಾವರ ಶ್ರೀಗಳು ಇಫ್ತಿಯಾರ್ ಕೂಟ ಆಯೋಜಿಸುವ ಮೂಲಕ ಸಮಾಜ ಕಟ್ಟುವ ಕೆಲಸ ಮಾಡಿದ್ದಾರೆ ಎಂದು ಸರ್ಕಾರದ ಮುಖ್ಯ ಸಚೇತಕ ಐವನ್ ಡಿಸೋಜಾ ಹೇಳಿದ್ದಾರೆ.

ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಶ್ರೀಗಳ ಈ  ನಡೆಯನ್ನು ವಿರೋಧಿಸುವ ಮೂಲಕ ಪ್ರಮೋದ್ ಮುತಾಲಿಕ್ ಸಮಾಜ ಒಡೆಯುವ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ರಾಜ್ಯದಲ್ಲಿ ಅವಧಿ ಪೂರ್ವ ಚುನಾವಣೆ ಇಲ್ಲ. ಸಿಎಂ ಸಿದ್ದರಾಮಯ್ಯ ರವರು ಇನ್ನೊಂದು ಬಜೆಟ್ ಮಂಡಿಸುತ್ತಾರೆ ಎಂದರು. (ವರದಿ-ಎಸ್.ಎನ್, ಎಂ.ಎನ್)

 

 

Leave a Reply

comments

Related Articles

error: