ಸುದ್ದಿ ಸಂಕ್ಷಿಪ್ತ

ನಾಳೆ ಯುವ ಒಕ್ಕೂಟದ ಮಹಾಸಭೆ

ಮಡಿಕೇರಿ, ಜೂ.28 : ಮಡಿಕೇರಿ ತಾಲ್ಲೂಕು ಯುವ ಒಕ್ಕೂಟದ 2016-17 ನೇ ಸಾಲಿನ 22 ನೇ ವಾರ್ಷಿಕ ಮಹಾಸಭೆ ಜೂ.30 ರಂದು ನಗರದಲ್ಲಿ ನಡೆಯಲಿದೆ ಎಂದು ಒಕ್ಕೂಟದ ತಾಲ್ಲೂಕು ಅಧ್ಯಕ್ಷ ನವೀನ್ ದೇರಳ ತಿಳಿಸಿದ್ದಾರೆ.

ಪತ್ರಿಕಾ ಹೇಳಿಕೆ ನೀಡಿರುವ ಅವರು, ತಮ್ಮ ಅಧ್ಯಕ್ಷತೆಯಲ್ಲಿ ನಗರದ ಹೊಟೇಲ್ ಸಮುದ್ರ ಸಭಾಂಗಣದಲ್ಲಿ ಬೆಳಗ್ಗೆ 10 ಗಂಟೆಗೆ ನಡೆಯುವ ಮಹಾಸಭೆಯಲ್ಲಿ ನೂತನ ಕಾರ್ಯಕಾರಿ ಸಮಿತಿಯನ್ನು ಕೂಡ ರಚಿಸಲಾಗುವುದೆಂದು ಹೇಳಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಮೊ.ಸಂ : 97404 04520 ನ್ನು ಸಂಪರ್ಕಿಸಬಹುದಾಗಿದೆ. (ವರದಿ: ಕೆಸಿಐ, ಎಲ್.ಜಿ)

Leave a Reply

comments

Related Articles

error: