ಮೈಸೂರು

ಅಂಗನವಾಡಿ ಕಟ್ಟಡ, ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟನೆ

ಮೈಸೂರು, ಜೂ.೨೮: ಮುಖ್ಯಮಂತ್ರಿ ಸಿದ್ದರಾಮಯ್ಯನವರು ವರುಣಾ ಕ್ಷೇತ್ರದ ಅಭಿವೃದ್ಧಿ ಜೊತೆಗೆ ರಾಜ್ಯವನ್ನು ಅಭಿವೃದ್ಧಿಪಡಿಸುತ್ತಿದ್ದಾರೆ. ಅವರಿಗೆ ಇದುವರೆಗೆ ಆಶೀರ್ವಾದ ಮಾಡಿದಂತೆ ನನಗೂ ಆಶೀರ್ವದಿಸಿ ಎಂದು ವರುಣಾ ಕ್ಷೇತ್ರದ ವಸತಿ ಜಾಗೃತಿ ಸಮಿತಿ ಅಧ್ಯಕ್ಷ ಡಾ.ಯತೀಂದ್ರ ಸಿದ್ದರಾಮಯ್ಯ ಮನವಿ ಮಾಡಿದರು.
ವರುಣಾ ಕ್ಷೇತ್ರದ ಕುಪ್ಪರವಳ್ಳಿಯಲ್ಲಿ ಅಂಗನವಾಡಿ ಕಟ್ಟಡ ಹಾಗೂ ಶುದ್ಧ ಕುಡಿಯುವ ನೀರಿನ ಘಟಕವನ್ನು ಉದ್ಘಾಟಿಸಿ ಸಿದ್ದಪ್ಪಾಜಿ ಕಂಡಾಯ ಹಬ್ಬದ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು ಕುಪ್ಪರವಳ್ಳಿ ಗ್ರಾಮದಲ್ಲಿ ೭ ಲಕ್ಷ ರೂ. ವೆಚ್ಚದ ಅಂಗನವಾಡಿ ಕಟ್ಟಡ ಹಾಗೂ ೭.೫ ಲಕ್ಷ ರೂ. ವೆಚ್ಚದ ಶುದ್ಧ ಕುಡಿಯುವ ನೀರಿನ ಘಟಕವನ್ನು ಸ್ಥಾಪಿಸಲಾಗಿದೆ. ಎಸ್‌ಇಪಿ ಯೋಜನೆಯಡಿ ಕಾಮಗಾರಿಗಳನ್ನು ಮಾಡಲಾಗಿದೆ. ಸಾಮಾನ್ಯ ವರ್ಗದ ಜನರ ಬೀದಿಗಳ ಅಭಿವೃದ್ಧಿಗೆ ೫೦ ಲಕ್ಷ ರೂ.ಗಳನ್ನು ಬಿಡುಗಡೆ ಮಾಡಲಾಗಿದೆ. ವರುಣಾ ಕ್ಷೇತ್ರದಲ್ಲಿ ಪ್ರತಿಯೊಬ್ಬರಿಗೂ ಶುದ್ಧ ಕುಡಿಯುವ ನೀರನ್ನು ಒದಗಿಸುವುದು ಸರ್ಕಾರದ ಉzಶವಾಗಿದೆ. ವರುಣಾದಲ್ಲಿ ಈಗಾಗಲೇ ೨೨ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಹಾಗೂ ರಾಜ್ಯದಲ್ಲಿ ಸಾವಿರಾರು ಕುಡಿಯುವ ನೀರಿನ ಘಟಕಗಳನ್ನು ಸ್ಥಾಪಿಸಲಾಗಿದೆ. ನದಿ ಮೂಲದಿಂದ ಗ್ರಾಮಗಳಿಗೆ ಮತ್ತು ಕೆರೆಗಳಿಗೆ ನೀರನ್ನು ಒದಗಿಸುವ ಕಾರ್ಯಕ್ರಮಗಳಾಗಿವೆ. ಉಳಿದ ೧೦ ತಿಂಗಳ ಅವಧಿಯಲ್ಲಿ ನಿಮ್ಮ ಬೇಡಿಕೆಗಳನ್ನು ಗಮನದಲ್ಲಿಟ್ಟುಕೊಂಡು ಉಳಿದ ಎಲ್ಲಾ ಕಾಮಗಾರಿಗಳನ್ನು ಮಾಡಿಕೊಡುವುದಾಗಿ ತಿಳಿಸಿದರು.
ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ಜಂಟಿ ಕಾರ್ಯದರ್ಶಿ ಎಂ.ರಾಮಯ್ಯ, ವಾಲ್ಮೀಕಿ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಎಸ್.ಸಿ.ಬಸವರಾಜು, ಬಿಳಿಗೆರೆ ಗ್ರಾ.ಪಂ.ಅಧ್ಯಕ್ಷ ಲಿಂಗಯ್ಯ, ತಾ.ಪಂ.ಸದಸ್ಯೆ ದೇವನೂರು ಮಹಾದೇವಮ್ಮ, ಮುಖಂಡರಾದ ಧರ್ಮೇಂದ್ರರಾಜು, ಮಾಲೇಗೌಡ, ರಂಗಸ್ವಾಮಿ, ಮರಯ್ಯ, ಮುನಿಯಪ್ಪ, ಶಿವನಾಗ ಪ್ರಕಾಶ್, ಚಿನ್ನಂಬಳ್ಳಿ ರಾಜು, ಪುಟ್ಟಣ್ಣ, ಕೆಂಪಣ್ಣ ಹಾಗೂ ಅಧಿಕಾರಿಗಳು ಹಾಜರಿದ್ದರು. (ವರದಿ ಬಿ.ಎಂ)

Leave a Reply

comments

Related Articles

error: