ಕರ್ನಾಟಕ

ಮಾದಪ್ಪನ ಹುಂಡಿಯಲ್ಲಿ 95 ಲಕ್ಷ ರೂ. ಸಂಗ್ರಹ 

ಚಾಮರಾಜನಗರ,ಜೂ.28-ಕೊಳ್ಳೇಗಾಲ ತಾಲೂಕಿನ ಶ್ರೀ ಮಲೆಮಹದೇಶ್ವರಬೆಟ್ಟದ ಮಾದಪ್ಪನ ಹುಂಡಿಯಲ್ಲಿ 95,47, 187 ರೂ. ನಗದು ಹಾಗೂ 48 ಗ್ರಾಂ ಚಿನ್ನ ಹಾಗೂ 1.85 ಕೆ.ಜಿ. ಬೆಳ್ಳಿ ಆಭರಣಗಳು ಸಂಗ್ರಹವಾಗಿದೆ.

ಮಲೆಮಹದೇಶ್ವರ ಬೆಟ್ಟದ ಮಾದಪ್ಪನ ಸನ್ನಿಧಿಯಲ್ಲಿ ಶ್ರೀ ಮಲೈ ಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಕೆ.ಎಂ.ಗಾಯತ್ರಿ ಹಾಗೂ ಶ್ರೀ ಸಾಲೂರು ಬೃಹನ್ಮಠದ ಶ್ರೀ ಪಟ್ಟದ ಗುರುಸ್ವಾಮಿ ಅವರ ಸಮ್ಮುಖದಲ್ಲಿ ಮಾದಪ್ಪನ ಹುಂಡಿಯ ಹಣವನ್ನು ಎಣಿಕೆ ಮಾಡಲಾಯಿತು.

ಹುಂಡಿ ಎಣಿಕೆ ಕಾರ್ಯದಲ್ಲಿ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರಾಭಿವೃದ್ಧಿ ಪ್ರಾಧಿಕಾರದ ಪ್ರಭಾರ  ಉಪಕಾರ್ಯದರ್ಶಿ ಎಂ.ಬಸವರಾಜು, ಎಸ್.ಬಿ.ಎಂ. ವ್ಯವಸ್ಥಾಪಕ ಸೆಂದಿಲ್ ನಾಥನ್  ಪಾಲ್ಗೊಂಡಿದ್ದರು. (ವರದಿ-ವಿ.ಎಸ್.ಎಸ್, ಎಂ.ಎನ್)

 

Leave a Reply

comments

Related Articles

error: