ಮೈಸೂರು

ನೇಪಾಳಿ ಗರ್ಭಿಣಿ ಮಹಿಳೆಯೋರ್ವಳಿಗೆ ಮೈಸೂರಿನ ಶಕ್ತಿಧಾಮದಲ್ಲಿ ಆಶ್ರಯ

ಮೈಸೂರು, ಜೂ.29: ಸುಮಾರು ಆರು ತಿಂಗಳ ಗರ್ಭಿಣಿಯೊಬ್ಬಳನ್ನು ಯಾರೋ ಲಾರಿಯೊಂದರಲ್ಲಿ ಕರೆತಂದು ಎಚ್.ಡಿ.ಕೋಟೆ ತಾಲೂಕಿನ ಕಂಚಮಳ್ಳಿ ಗ್ರಾಮದ ಬಳಿ ಬಿಟ್ಟು ಹೋಗಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.

ಈಕೆ ಮೂಲತ: ನೇಪಾಳದವರಾಗಿದ್ದು ಸುಮಾರು 25 ವರ್ಷ ವಯಸ್ಸಿನ ಮಹಿಳೆ ಎಂದು ತಿಳಿದು ಬಂದಿದೆ. ಈ ವಿಚಾರ ಅರಿತ ಅಲ್ಲಿನ ಅಂಗನವಾಡಿ ಕಾರ್ಯಕರ್ತೆ ಸಿ.ಡಿ.ಪಿ.ಒ ಗೆ ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ಸಾಂತ್ವನ ಮಹಿಳಾ ಕೇಂದ್ರದ ಸಹಾಯದೊಂದಿಗೆ ಗರ್ಭಿಣಿ ಮಹಿಳೆಯನ್ನು ಹಂಪಾಪುರ ಆಸ್ಪತ್ರೆಗೆ ಕರೆದೊಯ್ದು ಪ್ರಥಮ ಚಿಕಿತ್ಸೆ ಕೊಡಿಸಲಾಗಿದೆ.  ಬಳಿಕ ಮೈಸೂರು ಜಿಲ್ಲೆಯ ಎಚ್.ಡಿ.ಕೋಟೆ ತಾಲೂಕು ಕೇಂದ್ರದ ಸಾರ್ವಜನಿಕ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ.

ಆ ಮಹಿಳೆ ನೇಪಾಳಿ ಭಾಷೆಯಲ್ಲಿ ಮಾತನಾಡುತ್ತಿದ್ದು, ಈಕೆಯ ಸಂಪೂರ್ಣ ಮಾಹಿತಿ ಸಂಗ್ರಹಿಸಲು ಭಾಷೆ ತೊಡಕಾಗಿ ಕಳೆದ ರಾತ್ರಿಯಿಂದ ಆಸ್ಪತ್ರೆ ಸಿಬ್ಬಂದಿ, ಪೊಲೀಸರು ಪೇಚಿಗೆ ಸಿಲುಕಿದ್ದಾರೆ. ಇಂದು ಮಾಹಿತಿ ಸಂಗ್ರಹಿಸಲು ಪ್ರಯತ್ನಿಸಿದ ನಂತರ ಆಕೆಗೆ ಮೈಸೂರಿನ ಶಕ್ತಿಧಾಮದಲ್ಲಿ ಆಶ್ರಯ ಕೊಡಲಿದ್ದಾರೆ ಎಂದು ತಿಳಿದು ಬಂದಿದೆ. (ವರದಿ: ಆರ್.ವಿ, ಎಸ್.ಎನ್, ಎಲ್.ಜಿ)

Leave a Reply

comments

Related Articles

error: