ಮೈಸೂರು

ಕೌಶಲ್ಯಾಭಿವೃದ್ಧಿ ತರಬೇತಿಯನ್ನು ವಿದ್ಯಾಭ್ಯಾಸ ಮಾಡುವಾಗಲೇ ನೀಡಿದರೆ ಒಳ್ಳೆಯದು : ಚಂದ್ರಶೇಖರ್

ಮೈಸೂರು,ಜೂ.29:- ನಟರಾಜ ಮಹಿಳಾ ಪದವಿ ಪೂರ್ವ ಕಾಲೇಜಿನಲ್ಲಿ, ಭಾಷ್ ಸ್ಕಿಲ್ಸ್ ಇಂಡಿಯಾ ಬ್ರಿಡ್ಜ್ ಕಾರ್ಯಕ್ರಮ, ಕೌಶಲ್ಯಾಭಿವೃದ್ಧಿ ತರಬೇತಿ, ಉದ್ಘಾಟನಾ ಸಮಾರಂಭವನ್ನು ಗುರುವಾರ ಆಯೋಜಿಸಲಾಗಿತ್ತು.
ನಗರದ ಅಗ್ರಹಾರದಲ್ಲಿರುವ  ಕಾಲೇಜು ಸಭಾಂಗಣದಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮವನ್ನು ಡೆಪ್ಯೂಟಿ ಜನರಲ್ ಮ್ಯಾನೇಜರ್ ಚಂದ್ರಶೇಖರ್ ಉದ್ಘಾಟಿಸಿದರು. ಬಳಿಕ  ಮಾತನಾಡಿದ ಅವರು ವಿದ್ಯಾರ್ಥಿಗಳು ತಮ್ಮ ವಿದ್ಯಾರ್ಥಿ ಜೀವನದಲ್ಲಿ  ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಬೇಕು. ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸದ ಜೊತೆ ಜೊತೆಯಲ್ಲಿಯೇ  ಕೌಶಲ್ಯಾಭಿವೃದ್ಧಿ ತರಬೇತಿಗಳನ್ನು ನೀಡಬೇಕು. ವಿದ್ಯಾಭ್ಯಾಸ ಮುಗಿದ ನಂತರ ಕೌಶಲ್ಯಾಭಿವೃದ್ಧಿ ತರಬೇತಿ ನೀಡಿದರೇ ಅವರಿಗೆ ಕಷ್ಟವಾಗಲಿದೆ. ನಾವು ಬದುಕುತ್ತಿರುವ ಜಗತ್ತು ಸ್ಪರ್ಧಾತ್ಮಕ ಜಗತ್ತು, ಆದ್ದರಿಂದ ಇಂತಹ ಕೌಶಲ್ಯಾಭಿವೃದ್ಧಿ ತರಬೇತಿಯನ್ನು ವಿದ್ಯಾಭ್ಯಾಸ ಮಾಡುವಾಗಲೇ ನೀಡಲು ಮುಂದಾಗಬೇಕು. ವಿದ್ಯಾರ್ಥಿಗಳು ಕೂಡ ಇಂತಹ ತರಬೇತಿಗಳಿಗೆ ಭಾಗವಹಿಸಿ ಸದುಪಯೋಗಪಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ ತರಬೇತಿದಾರರಾದ ಪೂರ್ಣಿಮ, ಶೈಕ್ಷಣಿಕ ಸಂಯೋಜನಾಧಿಕಾರಿ ಪ್ರೊ.ಕೆ.ಸತ್ಯನಾರಾಯಣ, ಬ್ರಿಡ್ಜ್ ಕಾರ್ಯಕ್ರಮ ಸಂಯೋಜಕ ರಾಧಾಕೃಷ್ಣ, ಉಪನ್ಯಾಸಕಿ  ವಿ.ಡಿ.ಸುನೀತಾರಾಣಿ ಮತ್ತಿತರರು ಉಪಸ್ಥಿತರಿದ್ದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: