ಕರ್ನಾಟಕಪ್ರಮುಖ ಸುದ್ದಿ

ನಾಲೆಗಳಿಗೆ ನೀರು ಹರಿಸಲು ಒತ್ತಾಯಿಸಿ ನೀರಾವರಿ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ

ರಾಜ್ಯ(ಮಂಡ್ಯ)ಜ.29:- ಮಂಡ್ಯ ಜಿಲ್ಲೆಯ ನಾಲೆಗಳಿಗೆ ನೀರು ಹರಿಸಲು ಒತ್ತಾಯಿಸಿ ರೈತರು ನೀರಾವರಿ ಕಚೇರಿಗೆ ಮುತ್ತಿಗೆ ಹಾಕಿದ ಘಟನೆ ನಡೆದಿದೆ.
ಶ್ರೀರಂಗಪಟ್ಟಣ ತಾಲೂಕಿನ ಕೆ.ಆರ್.ಎಸ್ ಜಲಾಶಯದ ಬಳಿ ಇರುವ  ನೀರಾವರಿ  ಕಚೇರಿ ಬಳಿ ತೆರಳಿದ ರೈತರು ಜಲಾಶಯ ವ್ಯಾಪ್ತಿಯ ನಾಲೆಗಳಿಗೆ ಜಲಾಶಯದಿಂದ ನೀರು ಬಿಡುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಿದರು. ರೈತ ಮುಖಂಡ ಕೆ.ಎಸ್. ನಂಜುಂಡೇಗೌಡ ನೇತೃತ್ವದಲ್ಲಿ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ ರೈತರು ಜಿಲ್ಲೆಯ ಜನರು, ಜಾನುವಾರುಗಳಿಗೆ ಕುಡಿಯುವ ನೀರು ಮತ್ತು ಅಂತರ್ಜಲ ರಕ್ಷಣೆಗಾಗಿ ನಾಲೆಗಳಿಗೆ ನೀರು ಹರಿಸುವಂತೆ ಒತ್ತಾಯಿಸಿದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: