ಸುದ್ದಿ ಸಂಕ್ಷಿಪ್ತ

ಕಸಾಪ ವತಿಯಿಂದ ಕನ್ನಡದಲ್ಲಿ ಅತಿಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನ

ಮಡಿಕೇರಿ,ಜೂ.29:- ಕಳೆದ 2016-17ನೇ  ಸಾಲಿನ ಎಸ್‍ಎಸ್‍ಎಲ್‍ಸಿಯ ಕನ್ನಡ ಭಾಷೆಯಲ್ಲಿ 125ಕ್ಕೆ 125 ಅಂಕ ಮತ್ತು ಸಿಬಿಎಸ್‍ಸಿಯ ಹತ್ತನೇ ತರಗತಿಯಲ್ಲಿ 100ಕ್ಕೆ 100 ಅಂಕ ಹಾಗೂ ದ್ವಿತೀಯ  ಪಿಯುಸಿಯಲ್ಲಿ 100ಕ್ಕೆ 100 ಅಂಕ ಪಡೆದ ವಿದ್ಯಾರ್ಥಿಗಳನ್ನು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಸನ್ಮಾನಿಸಲು ಉದ್ದೇಶಿಸಿದ್ದು, ವಿದ್ಯಾರ್ಥಿಗಳ ದಾಖಲಾತಿ ವಿವರ ಕೋರಲಾಗಿದೆ.
ಕೊಡಗು ಜಿಲ್ಲೆಯಲ್ಲಿ  ವ್ಯಾಸಂಗ ಮಾಡಿದ ವಿದ್ಯಾರ್ಥಿಗಳು ಸನ್ಮಾನಕ್ಕೆ ಅರ್ಹರಾಗಿದ್ದು, ಜುಲೈ 3 ರೊಳಗೆ ಕನ್ನಡ ಸಾಹಿತ್ಯ ಪರಿಷತ್ ಕಚೇರಿ, ಕೋಟೆ ಆವರಣ, ಮಡಿಕೇರಿ, ಕೊಡಗು ಜಿಲ್ಲೆ ಇಲ್ಲಿಗೆ ವಿದ್ಯಾರ್ಥಿಗಳು ತಮ್ಮ ದಾಖಲಾತಿ ವಿವರಗಳನ್ನು ನೀಡಿ ತಮ್ಮ ಹೆಸರುಗಳನ್ನು ನೊಂದಾಯಿಸಿಕೊಳ್ಳಬೇಕಾಗಿ ತಿಳಿಸಲಾಗಿದೆ. ಹೆಚ್ಚಿನ ಮಾಹಿತಿಗೆ ಕೊಡಗು ಜಿಲ್ಲಾ ಕಸಾಪ ಅಧ್ಯಕ್ಷರಾದ ಲೋಕೇಶ್‍ಸಾಗರ್ ಮೊ.ಸಂಖ್ಯೆ;9742632283, 8277066123 ಸಂಪರ್ಕಿಸಬಹುದು. (ಕೆಸಿಐ,ಎಸ್.ಎಚ್)

Leave a Reply

comments

Related Articles

error: