ಸುದ್ದಿ ಸಂಕ್ಷಿಪ್ತ

ಜೂ.30 ರಂದು ಗಿಡನೆಡುವ ಕಾರ್ಯಕ್ರಮ

ಮಡಿಕೇರಿ,ಜೂ.29:- ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ವಕೀಲರ ಸಂಘ, ನೆಹರು ಯುವಕೇಂದ್ರ, ಗ್ರೀನ್ ಸಿಟಿ ಫೋರಂ, ರೋಟರಿ ಕ್ಲಬ್, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಪ್ರಾದೇಶಿಕ ಕಚೇರಿ, ಓಡಿಪಿ ಸಂಸ್ಥೆ, ತಾಲ್ಲೂಕು ಯುವ ಒಕ್ಕೂಟ, ಅರಣ್ಯ ಇಲಾಖೆ, ಮಡಿಕೇರಿ, ಗ್ರಾಮ ಪಂಚಾಯತ್, ಸರ್ಕಾರಿ ಪ್ರೌಢಶಾಲೆ ಮತ್ತು ಹಿರಿಯ ಪ್ರಾಥಮಿಕ ಶಾಲೆ, ಕಾರ್ನರ್ ಫ್ರೆಂಡ್ಸ್, ಸ್ತ್ರೀಶಕ್ತಿ ಸ್ವ ಸಹಾಯ ಸಂಘಗಳು ಮತ್ತು ವಿವಿಧ ಸಂಘ ಸಂಸ್ಥೆಗಳು ಕಡಗದಾಳು ಗ್ರಾಮ ಇವರ ಸಂಯುಕ್ತಾಶ್ರಯದಲ್ಲಿ ಶ್ರೀ ಬೊಟ್ಟಪ್ಪ ಯುವ ಸಂಘದ ಬೆಳ್ಳಿ ಮಹೋತ್ಸವದ ಅಂಗವಾಗಿ ಜೂನ್, 30 ರಂದು ಬೆಳಗ್ಗೆ 10 ಗಂಟೆಗೆ ಕಡಗದಾಳು ಸರ್ಕಾರಿ ಸಂಯುಕ್ತ ಪ್ರೌಢಶಾಲೆಯಲ್ಲಿ ಗಿಡನೆಡುವ ಕಾರ್ಯಕ್ರಮ ನಡೆಯಲಿದೆ. ಒಂದನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಪವನೇಶ್ ಡಿ. ಅವರು ಉದ್ಘಾಟಿಸಲಿದ್ದಾರೆ. (ಕೆಸಿಐ,ಎ.ಎಚ್)

Leave a Reply

comments

Related Articles

error: