ಮೈಸೂರು

ದಿನಗೂಲಿ ಗುತ್ತಿಗೆ ನೌಕರರನ್ನು ಖಾಯಂಗೊಳಿಸುವಂತೆ ಒತ್ತಾಯಿಸಿ ಪ್ರತಿಭಟನೆ

ಮೈಸೂರು,ಜೂ.30:-ಕರ್ನಾಟಕ ರಾಜ್ಯ ಸರಕಾರಿ ದಿನಗೂಲಿ ಗುತ್ತಿಗೆ ನೌಕರರನ್ನು ಖಾಯಂಗೊಳಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಸರಕಾರಿ ದಿನಗೂಲಿ ನೌಕರರ ಮಹಾಮಂಡಲದಿಂದ ಪ್ರತಿಭಟನೆ ನಡೆಯಿತು.

ಮೈಸೂರು  ಜಿಲ್ಲಾಧಿಕಾರಿ ಕಚೇರಿಯ ಎದುರು ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡ ಪ್ರತಿಭಟನಾಕಾರರು ವಿವಿಧ ಘೋಷಣೆ ಕೂಗಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆಯಲ್ಲಿ ಮಹಾಮಂಡಳಿಯ ಕಾರ್ಯದರ್ಶಿ ಜಯಶಂಕರ್ ಮಾತನಾಡಿ ಕರ್ನಾಟಕ ರಾಜ್ಯ ಸರ್ಕಾರಿ ದಿನಗೂಲಿ ನೌಕರರ ಮಹಾಮಂಡಳಿಯ ಅಧ್ಯಕ್ಷರಾದ ಡಾ.ಕೆ.ಎಸ್.ಶರ್ಮಾರವರು ಸಿ.ಎಂ.ಸಿದ್ದರಾಮಯ್ಯ. 11,000 ಗುತ್ತಿಗೆ ಪೌರ ಕಾರ್ಮಿಕರನ್ನು ಖಾಯಂಗೊಳಿಸುವ ಸರ್ಕಾರದ ನಿರ್ಣಯವನ್ನು ಪ್ರಕಟಿಸಿರುವುದಕ್ಕೆ ಅಭಿನಂದನೆ. ಇದೇ ರೀತಿಯಾಗಿ ರಾಜ್ಯದ ಎಲ್ಲಾ ಸರ್ಕಾರಿ ಇಲಾಖೆಗಳಲ್ಲಿ ಹಾಗೂ ನಿಗಮಗಳಲ್ಲಿ ಹೊರಗುತ್ತಿಗೆ ಹಾಗೂ ಒಳಗುತ್ತಿಗೆ ಆಧಾರದ ಮೇಲೆ ಹತ್ತಾರು ವರ್ಷಗಳಿಂದ ಕೆಲಸ ಮಾಡುತ್ತಿರುವ ಗುತ್ತಿಗೆ ನೌಕರರನ್ನು ಇವರೊಡನೆಯೇ ಖಾಯಂ ಮಾಡುವಂತೆ ಆದೇಶ ಮಾಡಬೇಕೆಂದು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ನೂರಾರು ಮಂದಿ ದಿನಗೂಲಿ ನೌಕರರು ಪಾಲ್ಗೊಂಡಿದ್ದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: