ಕರ್ನಾಟಕ

ಬಸವೇಶ್ವರ (ಕೆಂಪವಾಡ) ಏತ ನೀರಾವರಿ ಯೋಜನೆಗೆ ಶಂಕುಸ್ಥಾಪನೆ

ಬೆಳಗಾವಿ,ಜೂ.30-ಜಿಲ್ಲೆಯ ಅಥಣಿ ತಾಲೂಕಿನ ಮದಬಾವಿ ಗ್ರಾಮದಲ್ಲಿ ಬಸವೇಶ್ವರ (ಕೆಂಪವಾಡ) ಏತ ನೀರಾವರಿ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಶಂಕುಸ್ಥಾಪನೆ ನೆರವೇರಿಸಿದರು.

ಶಂಕುಸ್ಥಾಪನೆ ನೆರವೇರಿಸಿದ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, ಈ ಭಾಗದ ಜನರ ಬಹುದಿನಗಳ ಬೇಡಿಕೆಯನ್ನು ಸರ್ಕಾರ ಈಡೇರಿಸಿದೆ. ಬಸವೇಶ್ವರ (ಕೆಂಪವಾಡ) ಏತ ನೀರಾವರಿ ಯೋಜನೆಯಿಂದ ಅಥಣಿ ತಾಲೂಕಿನ ಉತ್ತರ ಭಾಗದ ೨೨ ಗ್ರಾಮಗಳ ಜನರಿಗೆ ಅನುಕೂಲವಾಗಲಿದೆ. ೧೩೦೦ ಕೋಟಿ ರೂ. ವೆಚ್ಚದ ಈ ಯೋಜನೆಯಿಂದ ೬೮೦೦೦ ಎಕರೆ ಪ್ರದೇಶಕ್ಕೆ ನೀರಾವರಿ ಸೌಲಭ್ಯ ದೊರಕಲಿದೆ ಎಂದರು.

ಈ ಸಂದರ್ಭದಲ್ಲಿ ಜಲಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ, ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಮತ್ತಿತತರು ಉಪಸ್ಥಿತರಿದ್ದರು. (ವರದಿ-ಎಸ್.ಎನ್, ಎಂ.ಎನ್)

 

Leave a Reply

comments

Related Articles

error: