Uncategorized

ಕೆ.ಆರ್.ಎಸ್ ಗೆ ಬಿಗಿ ಪೊಲೀಸ್ ಬಂದೋಬಸ್ತ್

ರಾಜ್ಯ(ಮಂಡ್ಯ),ಜೂ.30-ಕೆ.ಆರ್.ಎಸ್ ನಿಂದ ತಮಿಳುನಾಡಿಗೆ ನೀರು ಹರಿಸಲಾಗಿದೆ ಎಂದು ಆರೋಪಿಸಿ ಶ್ರೀರಂಗಪಟ್ಟಣ ಹಾಗೂ ಮಂಡ್ಯದಲ್ಲಿ ರೈತರು ಪ್ರತಿಭಟನೆ ನಡೆಸಿದ್ದಾರೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಕೆ.ಆರ್.ಎಸ್ ಗೆ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.

ಕೆ.ಆರ್.ಎಸ್ ನಿಂದ ತಮಿಳುನಾಡಿಗೆ ನೀರು ಬಿಟ್ಟಿದ್ದಾರೆ ಎಂದು  ಆರೋಪಿಸಿ ರೈತರು  ಪ್ರತಿಭಟನೆ ನಡೆಸಿದ್ದರು. ಇದೇ ಕಾರಣಕ್ಕೆ ರೈತರು ಕೆ.ಆರ್.ಎಸ್ ಗೂ ಮುತ್ತಿಗೆ ಹಾಕುವ ಸಾಧ್ಯತೆ ಇರುವುದರಿಂದ ಕೆ.ಆರ್.ಎಸ್ ನಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.

ಶುಕ್ರವಾರ ಬೆಳಿಗ್ಗೆ  ದಕ್ಷಿಣ ವಲಯ ಐಜಿಪಿ ವಿಫುಲ್ ಕುಮಾರ್ ಕೆ.ಆರ್.ಎಸ್ ಗೆ ಭೇಟಿ ನೀಡಿ ಭದ್ರತೆ ಪರಿಶೀಲಿಸಿದರಲ್ಲದೆ, ಎಸ್ಪಿ ರಾಧಿಕಾ ರವರಿಂದ ಮಾಹಿತಿ ಪಡೆದುಕೊಂಡಿದ್ದರು. (ವರದಿ-ಎಚ್.ಎನ್, ಎಂ.ಎನ್)

Leave a Reply

comments

Related Articles

error: