ಪ್ರಮುಖ ಸುದ್ದಿ

ಸರ್ಕಾರ ಬಡವರ, ದೀನದಲಿತರ ಮತ್ತು ಶೋಷಿತರ ಪರವಾಗಿದೆ; ಸಿದ್ದರಾಮಯ್ಯ

ಪ್ರಮುಖ ಸುದ್ದಿ, ಬೆಳಗಾವಿ, ಜೂ.30: ನಮ್ಮ ಸರ್ಕಾರ ಬಡವರ, ದೀನದಲಿತರ ಮತ್ತು ಶೋಷಿತರ ಪರವಾಗಿ ಕಾರ್ಯನಿರ್ವಹಿಸಿದೆ. ಜನತೆಯ ಬೇಡಿಕೆಗಳನ್ನು ಈಡೇರಿಸುವಲ್ಲಿ ಯಶಸ್ವಿಯಾಗಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಶುಕ್ರವಾರ ಅಥಣಿಯಲ್ಲಿ ಬಸವೇಶ್ವರ ಏತ ನೀರಾವರಿ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಿದ ಬಳಿಕ ಕಾಂಗ್ರೆಸ್ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಅವರು, ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಹೆಚ್ಚಿನ ಸ್ಥಾನಗಳನ್ನು ಗೆಲ್ಲುವುದು ಖಚಿತ. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಮತ್ತೊಮ್ಮೆ ಅಧಿಕಾರಕ್ಕೆ ಬರಲಿದೆ. ಅಲ್ಲದೆ 2019 ರಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ನಿಶ್ಚಿತ. ರಾಹುಲ್ ಗಾಂಧಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂದರು.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಜೈಲಿಗೆ ಹೋಗಿ ಬಂದಿದ್ದಾರೆ. ಅಲ್ಲದೆ ಅಥಣಿ ಕ್ಷೇತ್ರದ ಶಾಸಕ ಲಕ್ಷ್ಮಣ ಸವದಿ ವಿಧಾನಸಭೆಯಲ್ಲಿ ಬ್ಲೂ ಫಿಲಂ ನೋಡಿದ್ದಾರೆ. ಇವರಿಗೆ ಮಾನ ಮರ್ಯಾದೆ ಇದ್ದಿದ್ದರೆ ರಾಜಕೀಯ ನಿವೃತ್ತಿ ಪಡೆಯುತ್ತಿದ್ದರು ಎಂದರು.

ಪ್ರಧಾನಿ ನರೇಂದ್ರ ಮೋದಿ  ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಎನ್ನುತ್ತಾರೆ. ಆದರೆ, ಮುಸ್ಲಿಮರಿಗೆ, ದಲಿತರಿಗೆ, ಕ್ರಿಶ್ಚಿಯನ್ನರಿಗೆ ಅನ್ಯಾಯ ಮಾಡುತ್ತಾರೆ. 2018ರ ವಿಜಯಯಾತ್ರೆ ಬೆಳಗಾವಿಯಿಂದಲೇ ಆರಂಭವಾಗಬೇಕು. ಅದಕ್ಕಾಗಿ ಪ್ರತಿಯೊಬ್ಬ ಕಾಂಗ್ರೆಸ್ ಕಾರ್ಯಕರ್ತ ಮನೆ ಮನೆಗೆ ತೆರಳಿ ಸರಕಾರದ ಸಾಧನೆಗಳ ಬಗ್ಗೆ ಮನವರಿಕೆ ಮಾಡಿಕೊಡಬೇಕು ಎಂದು ತಿಳಿಸಿದರು. (ವರದಿ ಬಿ.ಎಂ)

 

Leave a Reply

comments

Related Articles

error: