ಮೈಸೂರು

ಮಡಿವಾಳ ಸಮಾಜವನ್ನು ಪರಿಶಿಷ್ಠ ಜಾತಿಗೆ ಸೇರಿಸಲು ಆಗ್ರಹ

ಮೈಸೂರು.ಜು.1 : ಮಡಿವಾಳ ಸಮುದಾಯವನ್ನು ಪರಿಶಿಷ್ಠ ಜಾತಿಗೆ ಸೇರಿಸುವಂತೆ ಮೈಸೂರು ಜಿಲ್ಲಾ ಮಡಿವಾಳ ಸಂಘದ ಉಪಾಧ್ಯಕ್ಷ ಎಸ್.ಜೆ.ಪ್ರಶಾಂತ್ ಮುಖ್ಯಮಂತ್ರಿಗಳನ್ನು ಆಗ್ರಹಿಸಿದರು.

ಶನಿವಾರ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆರ್ಥಿಕ, ಸಾಮಾಜಿಕವಾಗಿ ಹಿಂದುಳಿದಿರುವ ಜನಾಂಗದ ಬಗ್ಗೆ ಮೈಸೂರು ವಿವಿಯ ಪ್ರಾಧ್ಯಾಪಕರಾದ ಡಾ.ಅನ್ನಪೂರ್ಣ ಅವರು ರಾಜ್ಯದೆಲ್ಲೆಡೆ ಪ್ರವಾಸ ಮಾಡಿ ಸರ್ಕರಕ್ಕೆ  ಸಮಗ್ರ ವರದಿ ನೀಡಿದ್ದಾರೆ. ಈ ವರದಿಯನ್ನು ತಕ್ಷಣವೇ ಜಾರಿಗೊಳಿಸುವಂತೆ ಆಗ್ರಹಿಸಿದರು.

ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಅನ್ನಪೂರ್ಣ ವರದಿಯನ್ನು ಪರಿಶೀಲಿಸಿ ಪ್ರಸ್ತಾವನೆ ಸಲ್ಲಿಸುವಂತೆ ಸಮಾಜ ಕಲ್ಯಾಣ ಇಲಾಖೆ ಕಾರ್ಯದರ್ಶಿಗಳಿಗೆ ಸೂಚಿಸಿದ್ದಾರೆ. ಅಧಿಕಾರಿಗಳು ಈ ಬಗ್ಗೆ ಕ್ರಮ ಕೈಗೊಂಡು ಕೂಡಲೇ ವರದಿ ಸಲ್ಲಿಸಿ ಜನಾಂಗವನ್ನು ಪರಿಶಿಷ್ಠ ಜಾತಿಗೆ ಸೇರಿಸಬೇಕು ಇಲ್ಲವಾದರೇ ರಾಜ್ಯಾದ್ಯಂತ ಪ್ರತಿಭಟನೆ ನಡೆಸುವುದಾಗಿ ತಿಳಿಸಿದರು.

ಪದಾಧಿಕಾರಿಗಳ ನೇಮಕ : ಜನಾಂಗವನ್ನು ಬಲಪಡಿಸಲು ತಾಲ್ಲೂಕು ಮಟ್ಟದಲ್ಲಿ ಸಂಘವನ್ನು ಸ್ಥಾಪಿಸಲಾಗಿದೆ. ಕೆ.ಆರ್.ನಗರ ತಾಲ್ಲೂಕು ಅಧ್ಯಕ್ಷರನ್ನಾಗಿ ಧರ್ಮರಾಜ ಅವರನ್ನು ನೇಮಕ ಮಾಡಲಾಗಿದೆ ಎಂದು ಹೇಳಿದರು.

ಗೌರವಾಧ್ಯಕ್ಷರಾಗಿ ಸಿದ್ದನಕೊಪ್ಪಲು ಲಕ್ಷ್ಮಣ ಶೆಟ್ಟಿ, ಕಾರ್ಯದರ್ಶಿಯಾಗಿ ಭೇರ್ಯ ಹರೀಶ್, ಖಜಾಂಚಿಯಾಗಿ ಎಸ್.ಎಸ್.ಕುಮಾರ, ಉಪಾಧ್ಯಕ್ಷರಾಗಿ ಕಡತಾಳು ರಾಮಚಂದ್ರ, ಸಂಘಟನಾ ಕಾರ್ಯದರ್ಶಿಯಾಗಿ ಸಾಲಿಗ್ರಾಮ ಎಸ್.ಎಂ.ಹರೀಶ್, ಸಹಕಾರ್ಯದರ್ಶಿಯಾಗಿ ದೊಡ್ಡಕೊಪ್ಪಲು ಸೋಮಶೇಖರ, ಮಹಿಳಾ ಉಪಾಧ್ಯಕ್ಷರಾಗಿ ದಾಕ್ಷಯಿಣಿ, ಭಾಗ್ಯಮ್ಮ ಸೇರಿದಂತೆ ಒಂಬತ್ತು ಜನರನ್ನು ನಿರ್ದೇಶಕರನ್ನಾಗಿ ನೇಮಕ ಮಾಡಲಾಗಿದೆ ಎಂದು ತಿಳಿಸಿದರು.

ಸಂಘದ ಅಧ್ಯಕ್ಷ ಚಂದ್ರಶೇಖರ್, ಪ್ರಧಾನ ಕಾರ್ಯದರ್ಶಿ ಚನ್ನಕೇಶವ, ದಾಕ್ಷಯಿಣಿ ಇತರರು ಹಾಜರಿದ್ದರು. (ವರದಿ : ಕೆ.ಎಂ.ಆರ್)

Leave a Reply

comments

Related Articles

error: