ಸುದ್ದಿ ಸಂಕ್ಷಿಪ್ತ

ಅಲೆಮಾರಿ/ಅರೆ ಅಲೆಮಾರಿ ಜನಾಂಗ: ಸೌಲಭ್ಯ ಒದಗಿಸಲು ಅರ್ಜಿ ಆಹ್ವಾನ

ಮೈಸೂರು,ಜು.1-ಕರ್ನಾಟಕ ಅಲೆಮಾರಿ/ಅರೆ ಅಲೆಮಾರಿ ಅಭಿವೃದ್ಧಿ ಮಂಡಳಿ ಇವರು ಒದಗಿಸಿದ ಅನುದಾನದಲ್ಲಿ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ವತಿಯಿಂದ  ಅಲೆಮಾರಿ/ಅರೆ ಅಲೆಮಾರಿ ಜನಾಂಗಗಳವರಿಗೆ ಸೌಲಭ್ಯ ಒದಗಿಸಲು ಅರ್ಜಿ ಆಹ್ವಾನಿಸಿದೆ.

ಆಸಕ್ತರು ನಿಗದಿತ ಅರ್ಜಿಯನ್ನು ಕುವೆಂಪುನಗರದ ಪಂಚಮಂತ್ರ ರಸ್ತೆಯಲ್ಲಿರುವ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ  ಅಭಿವೃದ್ಧಿ ನಿಗಮದ ಕಚೇರಿಯಲ್ಲಿ ಜು.15 ರೊಳಗಾಗಿ ಪಡೆದು ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲಾತಿಗಳೊಂದಿಗೆ ಜು.31 ರೊಳಗಾಗಿ ಸಲ್ಲಿಸುವುದು. ಹೆಚ್ಚಿನ ಮಾಹಿತಿಗೆ ದೂ.ಸಂ. 0821-2341194 ಸಂಪರ್ಕಿಸಬಹುದಾಗಿದೆ. (ವರದಿ-ಎಂ.ಎನ್)

 

Leave a Reply

comments

Related Articles

error: