ಮೈಸೂರು

ಕಾಂಗ್ರೆಸ್ ಕಾರ್ಮಿಕ ವಿಭಾಗದ ವಿಶೇಷ ಕಾರ್ಯಕಾರಿಣಿ, ಸಮಾವೇಶಕ್ಕೆ ಚಾಲನೆ

ಮೈಸೂರು, ಜು.1: ಎರಡು ದಿನಗಳ ರಾಷ್ಟ್ರೀಯ ಕಾಂಗ್ರೆಸ್‌ನ ಕಾರ್ಮಿಕ ವಿಭಾಗದ ವಿಶೇಷ ಕಾರ್ಯಕಾರಿಣಿ ಹಾಗೂ ಸಮಾವೇಶಕ್ಕೆ ಶನಿವಾರ ಚಾಲನೆ ದೊರೆಯಿತು.
ಶನಿವಾರ ನಗರದ ಖಾಸಗಿ ಹೋಟೆಲ್‌ನಲ್ಲಿ ಆಯೋಜಿಸಿದ್ದ ಕಾರ್ಯಕ್ರಮವನ್ನು ಕಾಂಗ್ರೆಸ್ ಕಾರ್ಮಿಕ ವಿಭಾಗದ ರಾಷ್ಟ್ರಾಧ್ಯಕ್ಷ ಡಾ.ಜಿ.ಸಂಜೀವ ರೆಡ್ಡಿ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಕಾರ್ಮಿಕರು ಇಂದು ಅತ್ಯಂತ ಹೀನಾಯ ಸ್ಥಿತಿಯಲ್ಲಿ ಬದುಕು ದೂಡುತ್ತಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಕಾರ್ಮಿಕ ಸಂಘಟನೆಗಳನ್ನು ಬಲಗೊಳಿಸಬೇಕಿದೆ. ಕಾರ್ಮಿಕರು ಹಾಗೂ ಕಾರ್ಮಿಕ ಸಂಘಟನೆಗಳ ನಡುವೆ ಇರುವ ಅಂತರವನ್ನು ಕಡಿಮೆ ಮಾಡಿ ಸಾಮರಸ್ಯ ಬೆಳೆಸಬೇಕಿದೆ. ಅಲ್ಲದೆ ವೇತನ ತಾರತಮ್ಯ ಹಾಗೂ ಸಮಸ್ಯೆಗಳನ್ನು ಬಗೆಹರಿಸುವ ಸಲುವಾಗಿ ವಿಭಿನ್ನವಾದ ಕಾರ್ಮಿಕ ಚಳವಳಿ ರೂಪಿಸಬೇಕಿದೆ. ಆಡಳಿತ ಮಂಡಳಿಗಳು ಕಾರ್ಮಿಕರ ಹೋರಾಟ ಮಾಡುವ ಹಕ್ಕನ್ನೇ ಕಸಿದುಕೊಳ್ಳುತ್ತಿದ್ದು ಅದರ ವಿರುದ್ಧ ಗಂಭೀರ ಕ್ರಮ ಕೈಗೊಳ್ಳಬೇಕಿದೆ ಎಂದು ಹೇಳಿದರು.
ಸಭೆಯಲ್ಲಿ ಶಾಸಕ ಎಂ.ಕೆ.ಸೋಮಶೇಖರ್, ಯತೀಂದ್ರ ಸಿದ್ದರಾಮಯ್ಯ, ರಾಷ್ಟ್ರೀಯ ಕಾಂಗ್ರೆಸ್ ಕಾರ್ಮಿಕ ವಿಭಾಗದ ಉಪಾಧ್ಯಕ್ಷ ರಾಘವಯ್ಯ, ಅಶೋಕ್ ಸಿಂಗ್, ಆರ್.ಸಿ.ಕುಂದಿಯಾ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಡಾ.ಬಿ.ಜೆ.ವಿಜಯಕುಮಾರ್, ಜಿ ಪಂಚಾಯಿತಿ ಸದಸ್ಯೆ ಡಾ.ಪುಷ್ಪಾ ಅಮರನಾಥ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. (ವರದಿ ಬಿ.ಎಂ)

Leave a Reply

comments

Related Articles

error: