ಮೈಸೂರು

ತಮಿಳುನಾಡಿಗೆ ನೀರು : ಸರ್ಕಾರದ ನಡೆಗೆ ಖಂಡನೆ

ಮೈಸೂರು.ಜು.1 : ಕಬಿನಿ ಹಾಗೂ ಕೃಷ್ಣರಾಜ ಸಾಗರ ಜಲಾಶಯಗಳಿಂದ ತಮಿಳುನಾಡಿಗೆ 5 ಸಾವಿರ ಕ್ಯೂಸೆಕ್ಸ್ ಗಿಂತಲೂ ಅಧಿಕ ಪ್ರಮಾಣ ನೀರು ಹರಿಸುತ್ತಿರುವುದನ್ನು ಮೈಸೂರು ಜಿಲ್ಲಾ ಕನ್ನಡ ಚಳುವಳಿಗಾರರ ಸಂಘವೂ ತೀವ್ರವಾಗಿ ಖಂಡಿಸಿದೆ.

ಮಳೆ ಕೊರತೆಯಿಂದಾಗಿ ಕಳೆದ ಬಾರಿ ಜಲಾನಯನದ ವ್ಯಾಪ್ತಿಯಲ್ಲಿ ಬೆಳೆ ನಷ್ಟವಾಗಿತ್ತು. ಜನ, ಜಾನುವಾರುಗಳಿಗೂ ಕುಡಿಯಲು ನೀರಿಲ್ಲದಂತಹ ಪರಿಸ್ಥಿತಿ ಎದುರಾಗಿತ್ತು. ಹಾಗಿದ್ದರು ಸರ್ಕಾರ ಪ್ರಸಕ್ತ ಸಾಲಿನಲ್ಲಿ ಜಲಾಶಯಗಳು ಭರ್ತಿಯಾಗುವ ಮೊದಲೇ ರೈತರಿಗೆ ನೀರು ನೀಡದೇ ತಮಿಳುನಾಡಿಗೆ ಬಿಟ್ಟಿರುವ ನಡೆಯನ್ನು ತೀವ್ರವಾಗಿ ಖಂಡಿಸಿರುವ ಅಧ್ಯಕ್ಷ ಬಿ.ಎ.ಶಿವಶಂಕರ್ ಅವರು, ತಮಿಳುನಾಡಿಗೆ ಹರಿಸುತ್ತಿರುವ ನೀರನ್ನು ಕೂಡಲೇ ನಿಲ್ಲಿಸಿ ರಾಜ್ಯದ ಕೃಷಿ ಚಟುವಟಿಕೆಗಳಿಗೆ ನೀಡಬೇಕೆಂದು ಒತ್ತಾಯಿಸಿದ್ದಾರೆ. (ಕೆ.ಎಂ.ಆರ್)

Leave a Reply

comments

Related Articles

error: