ನಮ್ಮೂರುಮೈಸೂರು

ಸ್ವಚ್ಛತಾ ಕಾರ್ಯ ಅ.14ರಂದು

ಸಂವಿಧಾನ ಶಿಲ್ಪ ಭಾರತರತ್ನ ಡಾ.ಬಿ.ಆರ್. ಅಂಬೇಡ್ಕರ್ ಅವರ 125ನೇ ಜನ್ಮ ದಿನಾಚರಣೆಯನ್ನು ವರ್ಷವಿಡೀ ಆಚರಿಸಲಿದ್ದು ಈ ನಿಟ್ಟಿನಲ್ಲಿ 2017ರ ಏಪ್ರಿಲ್ 14ರವರೆಗೆ ಪ್ರತಿ ತಿಂಗಳು 14ನೇ ತಾರೀಕಿನಂದು ವಿಶೇಷ ವಿಭಿನ್ನ ಸಮಾಜಮುಖಿ ಕಾರ್ಯಕ್ರಮಗಳನ್ನು ನಗರದ ಕೃಷ್ಣರಾಜ ಕ್ಷೇತ್ರ ಬಿಜೆಪಿ ಘಟಕದಿಂದ ಹಮ್ಮಿಕೊಳ್ಳಲಾಗಿದೆ ಎಂದು ಕೃಷ್ಣರಾಜ ಕ್ಷೇತ್ರ ಬಿಜೆಪಿ ಅಧ್ಯಕ್ಷ ಹಾಗೂ ನಗರಪಾಲಿಕೆ ಸದಸ್ಯ ಬಿ.ವಿ.ಮಂಜುನಾಥ್ ತಿಳಿಸಿದರು.

ಅವರು ನಗರದಲ್ಲಿಂದು (ಅ.13) ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಪ್ರಧಾನಿ ನರೇಂದ್ರ ಮೋದಿಯವರ ಕರೆಯ ಮೇರೆಗೆ ಬಿಜೆಪಿ ಘಟಕವು ಅ.14(ಅ) ರಂದು ಬೆಳಗ್ಗೆ 7 ಗಂಟೆಗೆ ಕೃಷ್ಣರಾಜ ಕ್ಷೇತ್ರದ ನಾಚನಹಳ್ಳಿ ಪಾಳ್ಯದ ಪೆಟ್ರೋಲ್ ಬಂಕ್ ಬಳಿ ಸ್ವಚ್ಛತಾ ಕಾರ್ಯಕ್ರಮ ಹಮ್ಮಿಕೊಂಡಿದ್ದು ಮಹಾಪೌರ ಬಿ.ಎಲ್.ಭೈರಪ್ಪ, ಮಾಜಿ ಸಚಿವ ಎಸ್.ಎ.ರಾಮದಾಸ್, ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಲಿದ್ದಾರೆ.

ವಾರ್ಡಿನ ನಿವಾಸಿಗಳಿಗೆ ಆರೋಗ್ಯದ ಅರಿವು ಮೂಡಿಸಿ ಸ್ವಚ್ಛತಾ ಕಾರ್ಯ ಕೈಗೊಳ್ಳಲಿದ್ದು ಮಳೆ ನೀರು ಚರಂಡಿ, ರಸ್ತೆಗಳನ್ನು ಸ್ವಚ್ಛಗೊಳಿಸಿ ಸೊಳ್ಳೆ ನಿರೋಧಕ ಸಿಂಪಡಿಸಿ, ತ್ಯಾಜ್ಯ ವಿಲೇವಾರಿ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಸ್ತ್ರೀಶಕ್ತಿ ಸಂಘ ಹಾಗೂ ಸ್ಥಳೀಯ ಯುವಕರು ಕಾರ್ಯಕ್ರಮಕ್ಕೆ ಕೈ ಜೋಡಿಸಿದ್ದಾರೆ ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಉಪಾಧ್ಯಕ್ಷ ವಿ.ಸೋಮಸುಂದರ, ಎಸ್.ಸಿ.ಮೋರ್ಚಾ ಅಧ್ಯಕ್ಷ ಈಶ್ವರ್, ಉಪಾಧ್ಯಕ್ಷ ನಾಗರಾಜ್ ಹಾಗೂ ಪ್ರಧಾನ ಕಾರ್ಯದರ್ಶಿ ಸತ್ಯಪ್ರಕಾಶ್ ಉಪಸ್ಥಿತರಿದ್ದರು.

Leave a Reply

comments

Related Articles

error: