ಸುದ್ದಿ ಸಂಕ್ಷಿಪ್ತ

ಪೌರ ಕಾರ್ಮಿಕ ಬದುಕು & ಪರಿವರ್ತನೆ : ವಿಚಾರ ಸಂಕಿರಣ

ಮಾಜಿ ಮಹಾಪೌರ ಹಾಗೂ ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಆಯೋಗದ ನಾರಾಯಣರವರ ಜನ್ಮ ದಿನದ ಪ್ರಯುಕ್ತ ಅಭಿನಂದನಾ ಸಮಾರಂಭ ಹಾಗೂ ವಿಚಾರ ಸಂಕಿರಣವನ್ನು ಪ್ರಗತಿ ಸೇವಾ ಟ್ರಸ್ಟ್ ಮತ್ತು ನಾರಾಯಣರವರ ಅಭಿಮಾನಿ ಬಳಗದ ಸಂಯುಕ್ತಾಶ್ರಯಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಟ್ರಸ್ಟ್ ನ ಉಪಾಧ್ಯಕ್ಷ ಎನ್.ಲೋಕೇಶ್ ತಿಳಿಸಿದರು.

ಅವರು ನಗರದ ಪತ್ರಕರ್ತರ ಭವನದಲ್ಲಿಂದು (ಅ.13) ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಅ.16ರ ಭಾನುವಾರ ಬೆಳಿಗ್ಗೆ 11 ಗಂಟೆಗೆ ನಗರದ ಇನ್ಸ್ ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಸಭಾಂಗಣದಲ್ಲಿ ‘ಪೌರ ಕಾರ್ಮಿಕರ ಬದುಕು ಮತ್ತು ಪರಿವರ್ತನೆ’ ವಿಷಯ ಕುರಿತು ವಿಚಾರ ಸಂಕಿರಣ ನಡೆಯಲಿದೆ. ಸಾಹಿತಿ ಹಾಗೂ ಪ್ರಗತಿಪರ ಚಿಂತಕ ಪ್ರೊ.ಕಾಳೇಗೌಡ ನಾಗವಾರ ಉದ್ಘಾಟಿಸುವರು. ಕರ್ನಾಟಕ ಲೋಕಸೇವಾ ಆಯೋಗದ ಸದಸ್ಯ ಹಾಗೂ ಪ್ರಗತಿಪರ ಚಿಂತಕ ಪ್ರೊ.ಹೆಚ್.ಗೋವಿಂದಯ್ಯ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಶಾಸಕ ಎಂ.ಕೆ.ಸೋಮಶೇಖರ್, ನಗರಪಾಲಿಕೆ ಸದಸ್ಯ ಪುರುಷೋತ್ತಮ್, ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಕೆ.ದೀಪಕ್, ಮೈಸೂರು ವಿವಿಯ ಆಡಳಿತಾಧಿಕಾರಿ ಪ್ರೊ.ಸಿರಾಮಸ್ವಾಮಿ, ಅಭಿಯಂತರ ಎನ್.ಶ್ರೀನಿವಾಸಲು, ಸಫಾಯಿ ಕರ್ಮಚಾರಿ ಕಾವಲು ಸಮಿತಿ ರಾಜ್ಯ ಸಂಚಾಲಕ ಕೆ.ಬಿ.ಓಬಲೇಶ್ ಹಾಗೂ ಇತರರು ಭಾಗವಹಿಸುವರು. ನಂತರ ಭಾವನ ಸಾಂಸ್ಕೃತಿಕ ವೇದಿಕೆಯಿಂದ ಸುಗಮ ಸಂಗೀತ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದರು. ಟ್ರಸ್ಟ್ ನ ಕಾರ್ಯದರ್ಶಿ ಆರ್.ಲಕ್ಷ್ಮಣ್ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

Leave a Reply

comments

Related Articles

error: