ಮೈಸೂರು

ಎಲ್ಲಾ ಬ್ಯಾಂಕ್ ಗಳಲ್ಲಿ ಸಾಲಮನ್ನಾ ಮಾಡಲು ಒತ್ತಾಯಿಸಿ ಪ್ರತಿಭಟನೆ

ಮೈಸೂರು,ಜು.3:- ರೈತರ ಸಾಲಮನ್ನಾ ಪುನರ್ ಪರಿಶೀಲಿಸಿ ಸಂಪೂರ್ಣ ಎಲ್ಲಾ ಬ್ಯಾಂಕ್ ಗಳಲ್ಲಿ ಸಾಲಮನ್ನಾ ಮಾಡಿ ಎಂದು ಒತ್ತಾಯಿಸಿ ರಾಜ್ಯ ರೈತ ಸಂಘಗಳ ಒಕ್ಕೂಟ ಹಾಗೂ ರಾಜ್ಯ ಕಬ್ಬು ಬೆಳೆಗಾರರ ಸಂಘದ ವತಿಯಿಂದ ಸೋಮವಾರ ಪ್ರತಿಭಟನೆ ನಡೆಯಿತು.

ಮೈಸೂರು ತಾಲೂಕು ಕಚೇರಿ ಎದುರು ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡ ಪ್ರತಿಭಟನಾಕಾರರು ಮಾತನಾಡಿ ರೈತರಿಗೆ 50,000ರೂ ಸಾಲಮನ್ನಾ ಮಾಡಿರುವುದು ಹೆಚ್ಚಿನ ಸಹಕಾರಿಯಾಗಿಲ್ಲ. ಮೂರು ವರ್ಷಗಳ ಸತತ ಬರಗಾಲದಿಂದ ರೈತರು ಕಂಗೆಟ್ಟಿದ್ದಾರೆ. ಕುಟುಂಬ ನಿರ್ವಹಣೆ ಮಾಡಲು ಸಂಕಷ್ಟ ಅನುಭವಿಸುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಅರೆಬರೆ ಸಾಲಮನ್ನಾ ಮಾಡಿರುವುದರಿಂದ ಪ್ರಯೋಜನವಿಲ್ಲ  ಎಂದರು. ಕಬ್ಬಿಗೆ 2016-17ರ ಎಸ್ ಎ ಪಿ ದರ ನಿಗದಿಗೊಳಿಸಲು ಮುಖ್ಯಮಂತ್ರಿಗಳು ಕೂಡಲೇ ಕಬ್ಬು ಖರೀದಿ ಮಂಡಳಿ ಸಭೆ ಕರೆದು ನಿರ್ಧಾರ ಕೈಗೊಳ್ಳಬೇಕು. ಸರ್ಕಾರ ನಿರ್ಲಕ್ಷ್ಯ ನೀತಿ ಅನುಸರಿಸುವುದು ಮುಂದುವರೆದರೆ ಆ.9ರಂದು ರಾಜ್ಯಾದ್ಯಂತ ರೈತರು, ಜಿಲ್ಲಾ, ತಾಲೂಕು ಹಾಗೂ ಹಳ್ಳಿಗಳಲ್ಲಿ ಪ್ರಮುಖ ರಸ್ತೆಗಳ ಬಂದ್ ನಡೆಸಲಿದ್ದಾರೆ ಎಂದು ಎಚ್ಚರಿಸಿದರು.

ಪ್ರತಿಭಟನೆಯಲ್ಲಿ ವರಕೂಡು ಕೃಷ್ಣೇಗೌಡ ಸೇರಿದಂತೆ ನೂರಾರು ಮಂದಿ ಪಾಲ್ಗೊಂಡಿದ್ದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: