ಮೈಸೂರು

ಪೌರಕಾರ್ಮಿಕರಿಗೆ ಸೌಲಭ್ಯ ನೀಡಲು ಒತ್ತಾಯಿಸಿ ಪ್ರತಿಭಟನೆ

ಮೈಸೂರು,ಜು.3:- ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಗುತ್ತಿಗೆ ಪೌರಕಾರ್ಮಿಕರ ಖಾಯಮಾತಿಗೆ ಒತ್ತಾಯಿಸಿ ದಲಿತ ಸಂಘರ್ಷ ಸಮಿತಿ ವತಿಯಿಂದ ಸೋಮವಾರ ಪ್ರತಿಭಟನೆ ನಡೆಯಿತು.

ಮೈಸೂರು ಎಪಿಎಂಸಿ ಆವರಣದಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡ ಪ್ರತಿಭಟನಾಕಾರರು ಮಾತನಾಡಿ ಮೈಸೂರು ನಗರ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗುತ್ತಿಗೆ ಸ್ವಚ್ಛತಾ ಪೌರಕಾರ್ಮಿಕರಿಗೆ ಮೂಲಭುತ ಸೌಕರ್ಯ ನೀಡಬೇಕು. ಕೆಲಸದಲ್ಲಿ ಭದ್ರತೆ ನೀಡಬೇಕು ಸಮಾನಕೆಲಸಕ್ಕೆ ಸಮಾನ ವೇತನ ನೀಡಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ  ಜಿಲ್ಲಾ ಪ್ರಧಾನ ಸಂಚಾಲಕ ನಿಂಗರಾಜ, ಜಿಲ್ಲಾ ಸಂಚಾಲಕ ಬಸವಣ್ಣ, ಮೈಸೂರು ನಗರ ಸಂಚಾಲಕ ಕೆ.ನಂಜಪ್ಪ ಸೇರಿದಂತೆ ನೂರಾರು ಮಂದಿ ಪಾಲ್ಗೊಂಡಿದ್ದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: