ಮೈಸೂರು

ದ್ವಿಚಕ್ರ ವಾಹನ-ಕೆಎಸ್‍ಆರ್‍ಟಿಸಿ ಬಸ್ ಮಧ್ಯೆ ಡಿಕ್ಕಿ: ಸವಾರ ಸಾವು

ಮೈಸೂರಿನ ಎನ್.ಆರ್. ಮೊಹಲ್ಲಾ ಬಳಿ ಕೆಎಸ್‍ಆರ್‍ಟಿಸಿ ಬಸ್ ಹೋಂಡಾ ಸಿಟಿ ಸ್ಕೂಟಿಗೆ ಗುದ್ದಿದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಗುರುವಾರ ನಡೆದಿದೆ.

ಮೃತ ವ್ಯಕ್ತಿಯನ್ನು ಜೋಗಯ್ಯ(35) ಎಂದು ಗುರುತಿಸಲಾಗಿದ್ದು, ಬೆಂಗಳೂರು ರಸ್ತೆಯಿಂದ ಗಾಂಧಿನಗರದಲ್ಲಿರುವ ಮನೆಗೆ ತೆರಳುತ್ತಿದ್ದ ಸಂದರ್ಭದಲ್ಲಿ ಈ ದುರ್ಘಟನೆ ಸಂಭವಿಸಿದೆ.

ಈ ಅಪಘಾತವನ್ನು ಖಂಡಿಸಿ ಸಾರ್ವಜನಿಕರು ಕೆಲಕಾಲ ರಸ್ತೆಯಲ್ಲಿ ಪ್ರತಿಭಟನೆ ನಡೆಸಿದರು. ಎನ್‍.ಆರ್.ಮೊಹಲ್ಲಾ ಎಸ್‍ಐ ಕುಮಾರ್ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಶವವನ್ನು ಕೆ.ಆರ್.ಆಸ್ಪತ್ರೆಗೆ ಸಾಗಿಸಲಾಗಿದ್ದು, ಕೆಎಸ್‍ಆರ್‍ಟಿಸಿ ಬಸ್ ಮತ್ತು ಬಸ್‍ ಚಾಲಕನನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.

 

Leave a Reply

comments

Related Articles

error: