ದೇಶಪ್ರಮುಖ ಸುದ್ದಿ

ಕಾಂಗ್ರೆಸ್ ಸಮರ್ಥ ಪ್ರತಿಪಕ್ಷವಾಗಿ ಕೆಲಸ ಮಾಡುತ್ತಿಲ್ಲ : ನಿತೀಶ್ ಕುಮಾರ್ ತಿರುಗೇಟು

ಪಟ್ನಾ, ಜುಲೈ 3 : ಕಾಂಗ್ರೆಸ್ ಪಕ್ಷವು ದೇಶದಲ್ಲಿ ಸರಿಯಾದ ಪ್ರತಿಪಕ್ಷವಾಗಿ ಕೆಲಸ ಮಾಡುತ್ತಿಲ್ಲ ಎಂದು ಜೆಡಿಯು ಪಕ್ಷದ ನಾಯಕ ಹಾಗೂ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ತಿರುಗೇಟು ನೀಡಿದ್ದಾರೆ.

ಇದರ ಜೊತೆಗೆ ಕಾಂಗ್ರೆಸ್ ಪಕ್ಷ ಇದೇ ರೀತಿ ಮಲಗಿದ್ದರೆ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಎದುರಿಸುವುದು ಸಾಧ್ಯವಿಲ್ಲ. ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಎದುರಿಸಲು ಪ್ರತಿಪಕ್ಷ ಕಾಂಗ್ರೆಸ್ ಪರ್ಯಾಯ ಮಾರ್ಗಗಳನ್ನು ಹುಡುಕಿಕೊಳ್ಳಬೇಕು ಎಂದು ನಿತೀಶ್ ಕುಮಾರ್ ಅವರು ಕಿವಿಮಾತು ಹೇಳಿದ್ದಾರೆ.

ಕೇಂದ್ರದ ಜಿಎಸ್‍ಟಿ ಕಾಯ್ದೆಗೆ ನಿತೀಶ್ ಕುಮಾರ್ ಅವರ ಪಕ್ಷ ಜೆಡಿಯು ಬೆಂಬಲ ನೀಡಿದೆ. ಜೊತೆಗೆ ಎನ್ಡಿಎ ರಾಷ್ಟ್ರಪತಿ ಅಭ್ಯರ್ಥಿ ರಾಮನಾಥ್ ಕೋವಿಂದ್ ಅವರಿಗೂ ಬೆಂಬಲ ಸೂಚಿಸಿದೆ. ಈ ವಿಚಾರವಾಗಿ ಬಿಹಾರದ ಆಡಳಿತಾರೂಢ ಮಿತ್ರಪಕ್ಷ ಕಾಂಗ್ರೆಸ್ ಆಕ್ಷೇಪ ವ್ಯಕ್ತಪಡಿಸಿದ ಕಾರಣ ನಿತೀಶ್ ಅವರು ಈ ಹೇಳಿಕೆ ನೀಡಿದ್ದಾರೆ. ಕಾಂಗ್ರೆಸ್ ರಾಷ್ಟ್ರೀಯ ಪಕ್ಷವಾಗಿದ್ದು, 2019ರ ಲೋಕಸಭೆ ಚುನಾವಣೆಯನ್ನು ಎದುರಿಸುವ ನಿಟ್ಟಿನಲ್ಲಿ ಅಜೆಂಡಾ ಸಿದ್ಧಪಡಿಸಲಿ ಎಂದು ಈಗಾಗಲೇ ಹೇಳಿದ್ದೇನೆ. ಪ್ರತಿಪಕ್ಷ ಕಾಂಗ್ರೆಸ್ ಕೇವಲ ಪ್ರತಿಕ್ರಿಯಾತ್ಮಕ (ರಿಯಾಕ್ಷನ್) ಕೆಲಸವನ್ನಷ್ಟೇ ಮಾಡುತ್ತಿದೆ. ಇದು ಪ್ರಯೋಜನಕ್ಕೆ ಬಾರದು. ಇದರ ಜೊತೆಗೆ ಕಾಂಗ್ರೆಸ್ ಪರ್ಯಾಯ ಮಾರ್ಗಗಳನ್ನು ಹುಡುಕಿಕೊಳ್ಳಬೇಕಾದ ಅವಶ್ಯಕತೆ ಇದೆ ಎಂದು ಅವರು ಹೇಳಿದ್ದಾರೆ.

ರಾಷ್ಟ್ರಪತಿ ಚುನಾವಣೆಯಲ್ಲಿ ರಾಮನಾಥ್ ಕೋವಿಂದ್ ಅವರಿಗೆ ಬೆಂಬಲ ನೀಡುವ ನಿರ್ಧಾರವನ್ನು ನಿತೀಶ್ ಕುಮಾರ್ ಅವರು ಮರುಪರಿಶೀಲಿಲನೆ ನಡೆಸಬೇಕ ಎಂದು ಕಾಂಗ್ರೆಸ್ ಹೇಳಿತ್ತು. ಹೀಗಾಗಿ ನಿತೀಶ್ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಇದೇ ವೇಳೆ “ತಾವು ಮುಂದಿನ ಪ್ರಧಾನಿ ಅಭ್ಯರ್ಥಿಯೇ?” ಎಂಬ ಸುದ್ದಿಗಾರರ ಪ್ರಶ್ನೆಗೆ ನಿತೀಶ್ ಕುಮಾರ್ ಅವರು ಅಲ್ಲ ಎಂದು ಉತ್ತರಿಸಿದರು.

-ಎನ್.ಬಿ.

Leave a Reply

comments

Related Articles

error: