ಕರ್ನಾಟಕಪ್ರಮುಖ ಸುದ್ದಿ

ತನಿಖೆಗೆ ತಡೆಯಾಜ್ಞೆ ನೀಡಲು ಹೈಕೋರ್ಟ್ ನಕಾರ ; ಯಡಿಯೂರಪ್ಪಗೆ ಮತ್ತೆ ತಲೆಬಿಸಿ

ಬೆಂಗಳೂರು, ಜುಲೈ 3 : ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ವಿರುದ್ಧದ ಡಿನೋಟಿಫೈ ಪ್ರಕರಣದ ತನಿಖೆಯನ್ನು ನಿಲ್ಲಿಸುವಂತೆ ಕೋರಿ ಸಲ್ಲಿಸಲಾಗಿದ್ದ ಮೇಲ್ಮನವಿಯನ್ನು ರಾಜ್ಯ ಹೈಕೋರ್ಟ್ ಸೋಮವಾರ ತಿರಸ್ಕರಿಸಿದೆ.

ತನಿಖೆಗೆ ತಡೆಯಾಜ್ಞೆ ಸಿಕ್ಕಿ ಸ್ವಲ್ಪ ನಿರಾಳತೆಯಿಂದ ಇದ್ದ ಯಡಿಯೂರಪ್ಪ ಅವರಿಗೆ ಮತ್ತೆ ಸಂಕಷ್ಟ ಎದುರಾಗಿದೆ. 2010ರಲ್ಲಿ ಗಂಗೇನಹಳ್ಳಿ ವ್ಯಾಪ್ತಿಯಲ್ಲಿ ಜಮೀನು ಡಿನೋಟಿಫೈ ಮಾಡಿರುವ ಪ್ರಕರಣದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಜಯಕುಮಾರ್ ಎಂಬುವರು ಹೈಕೋರ್ಟ್ ಮೆಟ್ಟಿಲೇರಿದ್ದರು. ನ್ಯಾಯಾಲಯವು ಪ್ರಕರಣದ ತನಿಖೆಗೆ ಆದೇಶ ನೀಡಿದ್ದರು. ಲೋಕಾಯುಕ್ತ ಅಧಿಕಾರಿಗಳು ಮಾಜಿ ಮುಖ್ಯಮಂತ್ರಿ ಬಿಎಸ್‍ವೈ ವಿರುದ್ಧ ತನಿಖೆ ಆರಂಭಿಸಿದ್ದರು. ಈ ತನಿಖೆಯಲ್ಲಿ ಯಾವುದೇ ಹುರುಳಿಲ್ಲ ಎಂದು ಬಿಎಸ್ ಯಡಿಯುರಪ್ಪ ಅವರು ನ್ಯಾಯಾಲಯದ ಮೆಟ್ಟಿಲೇರಿದ್ದರು.

-ಎನ್.ಬಿ.

Leave a Reply

comments

Related Articles

error: