ಸುದ್ದಿ ಸಂಕ್ಷಿಪ್ತ

ಜು.5 ರಂದು ಕಾರ್ಯಾಗಾರ

ಮೈಸೂರು,ಜು.3-ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ನೀಡಲಾಗುವ ವಿದ್ಯಾರ್ಥಿವೇತನ, ಇನ್ನಿತರೆ ಸೌಲಭ್ಯಗಳ ಬಗ್ಗೆ ಅರಿವು ಮೂಡಿಸಲು ಜು.5 ರಂದು ಮಧ್ಯಾಹ್ನ 2.30 ಕ್ಕೆ ಕಲಾಮಂದಿರದಲ್ಲಿ ಅರಿವು ಮೂಡಿಸುವ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿದೆ.

ಕಾರ್ಯಾಗಾರದಲ್ಲಿ ಕಾಲೇಜಿನ ಪ್ರಾಂಶುಪಾಲರು, ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳು, ಸ್ವಯಂಸೇವ ಸಂಸ್ಥೆಯವರು ಭಾಗವಹಿಸಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸುವ ಬಗ್ಗೆ ಮಾಹಿತಿ ಪಡೆದುಕೊಳ್ಳುವಂತೆ  ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿಗಳು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗೆ ದೂ.ಸಂ. 0821-2422088 ಸಂಪರ್ಕಿಸಬಹುದು. (ವರದಿ-ಎಂ.ಎನ್)

 

Leave a Reply

comments

Related Articles

error: