ಸುದ್ದಿ ಸಂಕ್ಷಿಪ್ತ

ಜು.7 ರಂದು ಮಂಗಳೂರಿನಲ್ಲಿ ಸಮಾವೇಶ : ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ನಗರ ಭೇಟಿ ಮುಂದೂಡಿಕೆ

ಮಡಿಕೇರಿ ಜು.3 : ಕೆಪಿಸಿಸಿ ವತಿಯಿಂದ ಕೊಡಗು ಜಿಲ್ಲೆ ಸೇರಿದಂತೆ ಮಂಗಳೂರು ವಲಯ ಮಟ್ಟದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ ಜು.7 ರಂದು ಮಂಗಳೂರಿನಲ್ಲಿ ನಡೆಯುತ್ತಿರುವುದರಿಂದ ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾದ ಮುಕ್ಕಾಟಿರ ಶಿವು ಮಾದಪ್ಪ ಅವರು ಜು.7 ಕ್ಕೆ ಬದಲಾಗಿ ಜು.10 ರಂದು ಮಡಿಕೇರಿ ನಗರಕ್ಕೆ ಭೇಟಿ ನೀಡಲಿದ್ದಾರೆ ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿ ವಿ.ಪಿ.ಸುರೇಶ್ ತಿಳಿಸಿದ್ದಾರೆ.

ಮಂಗಳೂರಿನಲ್ಲಿ ಸಮಾವೇಶ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ವತಿಯಿಂದ ವಿಧಾನಸಭಾ ಚುನಾವಣೆಯ ಮಂಗಳೂರು ವಲಯದ ದಕ್ಷಿಣ ಕನ್ನಡ, ಉಡುಪಿ ಮತ್ತು ಕೊಡಗು ಜಿಲ್ಲೆಗಳ ಕಾಂಗ್ರೆಸ್ ಕಾರ್ಯಕರ್ತರ ಪೂರ್ವಭಾವಿ ಸಮಾವೇಶ ಮಂಗಳೂರಿನಲ್ಲಿ ತಾ. 7 ರಂದು ಬೆಳಗ್ಗೆ 11 ಗಂಟೆಗೆ ನಡೆಯಲಿದೆ.

ಸಮಾವೇಶದಲ್ಲಿ ಕೆಪಿಸಿಸಿ ಅಧ್ಯಕ್ಷರಾದ ಡಾ.ಜಿ.ಪರಮೇಶ್ವರ್, ಮುಖ್ಯಮಂತ್ರಿ ಸಿದ್ದರಾಮಯ್ಯ, ಲೋಕಸಭೆಯ ವಿಪಕ್ಷ ನಾಯಕರಾದ ಮಲ್ಲಿಕಾರ್ಜುನ್ ಖರ್ಗೆ, ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಉಸ್ತುವಾರಿ ಪ್ರಧಾನ ಕಾರ್ಯದರ್ಶಿಗಳಾದ ಕೆ.ಸಿ.ವೇಣುಗೋಪಾಲ್, ಕೆಪಿಸಿಸಿ ಪ್ರಚಾರ ಸಮಿತಿಯ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್, ಎಐಸಿಸಿ ಕರ್ನಾಟಕ ಉಸ್ತುವಾರಿ ಕಾರ್ಯದರ್ಶಿಗಳು, ಕೆಪಿಸಿಸಿ ಕಾರ್ಯಾಧ್ಯಕ್ಷರುಗಳಾದ ದಿನೇಶ್ ಗುಂಡೂರಾವ್ ಹಾಗೂ ಎಸ್.ಆರ್.ಪಾಟೀಲ್ ಪಾಲ್ಗೊಳ್ಳಲಿದ್ದಾರೆ ಎಂದು ವಿ.ಪಿ.ಸುರೇಶ್ ತಿಳಿಸಿದ್ದಾರೆ.

ಪಕ್ಷ ಸಂಘಟನೆಗೆ ಸಹಕಾರಿಯಾಗಲಿರುವ ಈ ಸಮಾವೇಶದಲ್ಲಿ ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರು ಮತ್ತು ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರುಗಳು ಹಾಗೂ ಪದಾಧಿಕಾರಿಗಳು, ಜಿಲ್ಲಾ ಉಸ್ತುವಾರಿ ಮತ್ತು ಜಿಲ್ಲೆಗೆ ಸಂಬಂಧಪಟ್ಟ ಕೆಪಿಸಿಸಿ ಪದಾಧಿಕಾರಿಗಳು, ಸಂಸದರು, ಶಾಸಕರುಗಳು, 2013ರ ವಿಧಾನಸಭಾ ಚುನಾವಣೆ ಮತ್ತು 2014ರ ಲೋಕಸಭಾ ಚುನಾವಣೆಯ ಅಭ್ಯರ್ಥಿಗಳು, ಮಾಜಿ ಸಂಸದರು, ಶಾಸಕರು, ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳು, ಜಿಲ್ಲಾ ಪಂಚಾಯತಿ, ತಾಲ್ಲೂಕು ಪಂಚಾಯತಿ ಚುನಾಯಿತ ಸದಸ್ಯರುಗಳು, ಪಕ್ಷದ ಮುಂಚೂಣಿ ಘಟಕ, ವಿಭಾಗ ಮತ್ತು ಸೆಲ್‍ಗಳ ಪ್ರಧಾನರು, ಪದಾಧಿಕಾರಿಗಳು, ಸಂಬಂಧಪಟ್ಟ ಎಲ್ಲಾ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿ ಸಮಾವೇಶವನ್ನು ಯಶಸ್ವಿಗೊಳಿಸ ಬೇಕೆಂದು ವಿ.ಪಿ.ಸುರೇಶ್ ಮನವಿ ಮಾಡಿದ್ದಾರೆ. (ವರದಿ: ಕೆಸಿಐ, ಎಲ್.ಜಿ)

Leave a Reply

comments

Related Articles

error: