ಮೈಸೂರು

ಜೆಡಿಎಸ್ ಸೇರ್ಪಡೆಗೊಳ್ಳಲಿರುವ ಮಾಜಿ ಸಂಸದ ಹೆಚ್.ವಿಶ್ವನಾಥ್

ಮೈಸೂರು,ಜು.4:- ಮಂಗಳವಾರ (ಇಂದು)  ಮಾಜಿ ಸಂಸದ ಎಚ್. ವಿಶ್ವನಾಥ್ ಜೆಡಿಎಸ್ ಸೇರ್ಪಡೆಯಾಗಲಿದ್ದಾರೆ.

ಬೆಂಗಳೂರಿನ ಜೆಡಿಎಸ್ ಕಚೇರಿಯಲ್ಲಿ ವಿಶ್ವನಾಥ್ ಪಕ್ಷ ಸೇರ್ಪಡೆಯಾಗಲಿದ್ದು, ವಿಶ್ವನಾಥ್ ಜೊತೆ ಕಾಂಗ್ರೆಸ್ಸಿನ ಪ್ರಮುಖ ಮುಖಂಡರೂ ಜೆಡಿಎಸ್ ಗೆ ಸೇರ್ಪಡೆಗೊಳ್ಳುವ ನಿರೀಕ್ಷೆಯಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಆಪ್ತ ಪ್ರೊ. ಗೋವಿಂದಪ್ಪ ಸಹ ವಿಶ್ವನಾಥ್  ಅವರನ್ನು ಬೆಂಬಲಿಸಿ ಜೆಡಿಎಸ್ ಸೇರ್ಪಡೆಗೊಳ್ಳಲಿದ್ದಾರೆ ಎಂಬ ಮಾತುಗಳು ಕೇಳಿ ಬಂದಿವೆ. ಮುಖಂಡರಾದ ಸೋಮಸುಂದರ್, ಪಾರ್ಥಸಾರಥಿ, ಚನ್ನಬಸಪ್ಪ ಸೇರಿ ಹಲವು ಪ್ರಮುಖರು ವಿಶ್ವನಾಥ್ ಜೊತೆ ಜೆಡಿಎಸ್ ಸೇರ್ಪಡೆಗೊಳ್ಳಲಿದ್ದಾರೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: