ಕರ್ನಾಟಕಪ್ರಮುಖ ಸುದ್ದಿ

ಸಿದ್ದರಾಮಯ್ಯ ಕ್ಷಮೆ ಕೇಳದಿದ್ದರೆ ಮಾನನಷ್ಟ ಮೊಕದ್ದಮೆ ಹೂಡುತ್ತೇನೆ : ಯಡಿಯುರಪ್ಪ

ಬೆಂಗಳೂರು, ಜುಲೈ 4 : ಸಿಎಂ ಸಿದ್ದರಾಮಯ್ಯ ಬಹಿರಂಗ ಕ್ಷಮೆ ಕೇಳಬೇಕು. ಕೇಳದೇ ಹೋದರೆ ಮಾನನಷ್ಟ ಮೊಕದ್ದಮೆ ಹಾಕುತ್ತೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಬರದೆ ಹೋಗಿದ್ದರೆ ಯಡಿಯೂರಪ್ಪ ಮತ್ತು ಅಮಿತ್ ಶಾ ಅವರು ಜೈಲಿನಲ್ಲಿರುತ್ತಿದ್ದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇತ್ತೀಚೆಗೆ ನೀಡಿದ್ದಾರೆನ್ನಲಾದ ಹೇಳಿಕೆಯ ಕುರಿತು ಪ್ರತಿಕ್ರಿಯಿಸಿರುವ ಬಿ.ಎಸ್. ಯಡಿಯೂರಪ್ಪ ಅವರು, “ಮುಖ್ಯಮಂತ್ರಿಗಳು ಮೂರು ದಿನಗಳ ಒಳಗೆ ಬಹಿರಂಗ ಕ್ಷಮೆ ಕೇಳಬೇಕು. ಇಲ್ಲವಾದರೆ ಮಾನನಷ್ಟ ಮೊಕದ್ದಮೆ ಹೂಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕಿಡಿ ಕಾರಿದರು.

ಜನಸಂಘದ ಸಂಸ್ಥಾಪಕರಾದ ಪಂಡಿತ್ ದೀನ್ದಯಾಳ್ ಉಪಾಧ್ಯಾಯ ಅವರ ಜನ್ಮ ಶತಾಬ್ದಿಯ ಸಂದರ್ಭ ಬಿಜೆಪಿ ವಿಸ್ತಾರಕ್ ಹೆಸರಿನಲ್ಲಿ ಮನೆ ಮನೆ ಸಂಪರ್ಕ ಅಭಿಯಾನ ನಡೆಸುತ್ತಿದೆ. ಇದರ ಅಂಗವಾಗಿ ಯಡಿಯೂರಪ್ಪ ಅವರು ಮಂಗಳವಾರ ಶಿವಾಜಿನಗರ ವಿಧಾನಸಭಾ ಕ್ಷೇತ್ರದ ಸಂಪಂಗಿ ರಾಮನಗರದಲ್ಲಿ ಮನೆಮನೆಗೆ ಮನೆಗಳಿಗೆ ಭೇಟಿ ನೀಡುವ ಕಾರ್ಯಕ್ರಮದಲ್ಲಿ ಪಾಲ್ಗೊಂಡ ವೇಳೆ ಸುದ್ದಿಗಾರರಿಗೆ ಪ್ರತಿಕ್ರಿಯೆ ನೀಡಿದ್ದಾರೆ.

-ಎನ್.ಬಿ.

Leave a Reply

comments

Related Articles

error: