ಕರ್ನಾಟಕ

ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಗೆ 60 ರ ಸಂಭ್ರಮ

ಸೋಮವಾರಪೇಟೆ, ಜು.4: ಶಾಸಕರಾದ ಎಂ.ಪಿ. ಅಪ್ಪಚ್ಚು ರಂಜನ್ ಅವರು ಜು. 4 ರಂದು 60ನೇ ವರ್ಷಕ್ಕೆ ಪದಾರ್ಪಣೆ ಮಾಡಿದರು.

ನಗರದ ವಲ್ಲಭಬಾಯಿ ರಸ್ತೆಯಲ್ಲಿರುವ ಮಹಿಳಾ ಸಮಾಜದ ಅಧ್ಯಕ್ಷೆ ನಳಿನಿ ಗಣೇಶ್ ಅವರ ಮನೆಗೆ ಭೇಟಿ ನೀಡಿದ್ದ ಶಾಸಕ ಅಪ್ಪಚ್ಚು ರಂಜನ್ ಹಾಗೂ ಚಿಕ್ಕಮಗಳೂರಿನ ಶಾಸಕ ಸಿ.ಟಿ. ರವಿ ಅವರುಗಳು ಮಾತುಕತೆ ನಡೆಸುತ್ತಿದ್ದರು.

ಈ ಸಂದರ್ಭ ಕೂಡಿಗೆ ಕ್ಷೇತ್ರದ ಜಿಲ್ಲಾ ಪಂಚಾಯತ್ ಸದಸ್ಯೆ ಮಂಜುಳಾ, ಗ್ರಾ.ಪಂ. ಸದಸ್ಯ ಭಾಸ್ಕರ್ ನಾಯಕ್ ಅವರುಗಳು ಕೇಕ್ ತಂದು ಶಾಸಕರಿಗೆ ಹುಟ್ಟುಹಬ್ಬದ ಶುಭಾಶಯ ಕೋರಿ ಸಿಹಿ ವಿತರಿಸಿದರು. (ವರದಿ: ಕೆಸಿಐ, ಎಲ್.ಜಿ)

Leave a Reply

comments

Related Articles

error: