ಸುದ್ದಿ ಸಂಕ್ಷಿಪ್ತ

ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ

ಮಡಿಕೇರಿ ಜು.4:-ಪ್ರಸಕ್ತ(2017-18ನೇ) ಸಾಲಿಗೆ ಐಐಎಂ, ಐಐಟಿ, ಐಐಎಸ್‍ಸಿ ಮುಂತಾದ ಪ್ರತಿಷ್ಠಿತ ರಾಷ್ಟ್ರೀಯ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಪ್ರವೇಶ ಪಡೆದಿರುವ ಹಿಂದುಳಿದ ವರ್ಗಗಳ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ನೀಡಲು ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಹಾಗೂ 3ಬಿ ಮತ್ತು ಸಾಮಾನ್ಯ ವರ್ಗದ ಅರ್ಹ ವಿದ್ಯಾರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು ಜುಲೈ, 29 ಕೊನೆಯ ದಿನವಾಗಿದೆ ಹೆಚ್ಚಿನ ವಿವರಗಳಿಗೆ ದೂ.ಸಂ: 080-65970004 ನ್ನು ಕಚೇರಿ ವೇಳೆಯಲ್ಲಿ ಸಂರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾಧಿಕಾರಿ ಅವರು ತಿಳಿಸಿದ್ದಾರೆ. (ಕೆಸಿಐ,ಎಸ್.ಎಚ್)

Leave a Reply

comments

Related Articles

error: