ಸುದ್ದಿ ಸಂಕ್ಷಿಪ್ತ

ಯಕ್ಷಗಾನ ಕಲಾಶಿಬಿರಕ್ಕೆ ಅರ್ಜಿ ಆಹ್ವಾನ

ಮಡಿಕೇರಿ ಜು.4:-ಕರ್ನಾಟಕ ಯಕ್ಷಗಾನ ಬಯಲಾಟ ಅಕಾಡೆಮಿಯು ವಿಶೇಷ ಘಟಕ ಯೋಜನೆಯಡಿ ಪರಿಶಿಷ್ಟ ವರ್ಗದ(ಜಾತಿ) ಕಲಾವಿದರಿಗೆ ಹಾಗೂ ಗಿರಿಜನ ಉಯೋಜನೆಯಡಿ ಪರಿಶಿಷ್ಟ ಪಂಗಡದ ಶಿಬಿರಾರ್ಥಿಗಳಿಗೆ 2017-18ನೇ ಸಾಲಿನಲ್ಲಿ ಯಕ್ಷಗಾನ ಮತ್ತು ಬಯಲಾಟ ಕಲಾಶಿಬಿರಗಳನ್ನು ನಡೆಸಲು ಉದ್ದೇಶಿಸಿದೆ. ಯಕ್ಷಗಾನ ಮತ್ತು ಬಯಲಾಟ ಕಲಾಪ್ರಕಾರಗಳಲ್ಲಿ (ತೆಂಕುತಿಟ್ಟು/ಬಡಗುತಿಟ್ಟು ಯಕ್ಷಗಾನ, ಮೂಡಲಪಾಯ ಯಕ್ಷಗಾನ, ಶ್ರೀಕೃಷ್ಣಪಾರಿಜಾತ, ದೊಡ್ಡಾಟ, ಸಣ್ಣಾಟ, ಘಟ್ಟದಕೋರೆ, ತೊಗಲುಗೊಂಬೆಯಾಟ, ಸೂತ್ರದಗೊಂಬೆಯಾಟ, ಸಲಾಕೆಗೊಂಬೆಯಾಟ) ತರಬೇತಿ ನೀಡಬಯಸುವ ಹಿರಿಯ ಕಲಾವಿದರುಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ನಮೂನೆ ಪ್ರತಿಯನ್ನು ಆಯಾಯ ಜಿಲ್ಲೆಯ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ  ಸಹಾಯಕ ನಿರ್ದೇಶಕರ ಕಚೇರಿಯಿಂದ ಪಡೆದು ಅಕಾಡೆಮಿ ಕಚೇರಿಗೆ ಕಳುಹಿಸಬಹುದು. ತರಬೇತಿ ನೀಡಬಯಸುವ ಆಸಕ್ತ ಕಲಾವಿದರುಗಳು ಅರ್ಜಿಯನ್ನು ಭರ್ತಿ ಮಾಡಿ ರಿಜಿಸ್ಟ್ರಾರ್, ಕರ್ನಾಟಕ ಯಕ್ಷಗಾನ ಬಯಲಾಟ ಅಕಾಡೆಮಿ, ಕನ್ನಡ ಭವನ, 2ನೇ ಮಹಡಿ, ಚಾಲುಕ್ಯ ವಿಭಾಗ, ಜೆಸಿರಸ್ತೆ, ಬೆಂಗಳೂರು-560002 ಇಲ್ಲಿಗೆ ಕಳುಹಿಸಿಕೊಡಬೇಕಾಗಿ ಕೋರಿದೆ. ಅರ್ಜಿ ಸಲ್ಲಿಸಲು ಜುಲೈ, 21 ಕೊನೆಯ ದಿನವಾಗಿರುತ್ತದೆ. ಹೆಚ್ಚಿನ ಮಾಹಿತಿಗೆ ಅಕಾಡೆಮಿ ದೂ.ಸಂ:-080-22113146 ನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ಯಕ್ಷಗಾನ ಬಯಲಾಟ ಅಕಾಡೆಮಿಯ ರಿಜಿಸ್ಟ್ರಾರ್ ಅವರು ತಿಳಿಸಿದ್ದಾರೆ. (ಕೆಸಿಐ,ಎಸ್.ಎಚ್)

Leave a Reply

comments

Related Articles

error: