ಸುದ್ದಿ ಸಂಕ್ಷಿಪ್ತ

ಅರ್ಜಿ ಆಹ್ವಾನ

ಮಡಿಕೇರಿ ಜು.4:-ಅಲ್ಪಸಂಖ್ಯಾತರ ನಿರ್ದೇಶನಾಲಯ, ಬೆಂಗಳೂರು ವತಿಯಿಂದ 2017-18 ನೇ ಸಾಲಿನಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತ ಮುಸ್ಲಿಂ, ಕ್ರಿಶ್ಚಿಯನ್, ಸಿಖ್, ಪಾರ್ಸಿ, ಜೈನ್, ಬೌದ್ಧ ಸಮುದಾಯದ ವಿದ್ಯಾರ್ಥಿಗಳಿಂದ  ವಿದ್ಯಾರ್ಥಿ ವೇತನ ಪಡೆಯಲು ಅರ್ಜಿ  ಆಹ್ವಾನಿಸಲಾಗಿದೆ.

ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ:-1ನೇ ತರಗತಿಯಿಂದ 10 ನೇ ತರಗತಿಯವರೆಗಿನ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಅರ್ಜಿಯನ್ನು ಸಲ್ಲಿಸಲು ಆಗಸ್ಟ್, 31 ಕೊನೆಯ ದಿನವಾಗಿದೆ ಹಾಗೂ ನವೀಕರಣ ವಿದ್ಯಾರ್ಥಿಗಳಿಗೆ ಅರ್ಜಿ ಸಲ್ಲಿಸಲು ಜುಲೈ, 31 ಕೊನೆಯ ದಿನವಾಗಿರುತ್ತದೆ. (ಕೆಸಿಐ,ಎಸ್.ಎಚ್)

Leave a Reply

comments

Related Articles

error: